ಬೆಂಗಳೂರು:- ಮುಸ್ಲಿಂ ಯುವತಿ ತನ್ನ ಗೆಳೆಯನ ಜೊತೆ ಬೈಕ್ ಮೇಲೆ ಕುಳಿತಿದ್ದಕ್ಕೆ ಪುಂಡರ ಗ್ಯಾಂಗ್‌ವೊಂದು ಕಿರಿಕ್ ಮಾಡಿ, ಯುವಕನ ಮೇಲೂ ಹಲ್ಲೆ ನಡೆಸಿದ್ದ ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಇದೇ ಘಟನೆಗೆ ಸಂಬಂಧಿಸಿದಂತೆ ಚಂದ್ರಾಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಹಿಂದೂ ಯುವಕ ಮುಸ್ಲಿಂ ಯುವತಿ ಮೇಲೆ ನೈತಿಕ ಪೊಲೀಸ್ ಗಿರಿ ಮೆರೆದ ಐವರು ಪುಂಡರನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಇನ್ನೂ ಈ ವಿಚಾರವಾಗಿ ಪಶ್ಚಿಮ ವಿಭಾಗದ ಡಿಸಿಪಿ ಗಿರೀಶ್ ಹೇಳಿಕೆ ನೀಡಿದ್ದು, ಮೊನ್ನೆ ಪಾರ್ಕ್ ಎದುರುಗಡೆ ಒಂದು ಹುಡುಗ, ಹುಡುಗಿ ಬೈಕ್ ಮೇಲೆ ಕೂತಿರ್ತಾರೆ. ಅದನ್ನ ಒಂದಷ್ಟು ಜನ ಪ್ರಶ್ನೆ ಮಾಡುತ್ತಾರೆ. ಇಲ್ಲಿ ಏಕೆ ಬಂದಿದೀಯಾ, ಮನೆಯಲ್ಲಿ ಹೇಳಿ ಬಂದಿದ್ದೀಯಾ ಅಂತಾ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಯುವತಿಯಿಂದ ದೂರು ಪಡೆಯಲಾಗಿದೆ. ಐವರು ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.
ಹಲ್ಲೆ ಮಾಡಿರುವ ಬಗ್ಗೆ ಕೂಡ ಆರೋಪವಿದೆ. ಎಲ್ಲರೂ ಚಂದ್ರಾಲೇಔಟ್ ಠಾಣಾ ವ್ಯಾಪ್ತಿಯಲ್ಲಿ ವಾಸಿಸುವವರಾಗಿದ್ದಾರೆ. ಆರೋಪಿಗಳು ಗ್ಯಾರೆಜ್, ಡೆಲಿವರಿ ಬಾಯ್ ಆಗಿ ಕೆಲಸ ಮಾಡುತ್ತಿದ್ದಾರೆ. ಸದ್ಯ ಆರೋಪಿಗಳನ್ನ ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದಿದ್ದಾರೆ.