ಬೆಂಗಳೂರು:- ಇತ್ತೀಚೆಗೆ ದುಷ್ಕರ್ಮಿಗಳಿಂದ ಬರ್ಬರವಾಗಿ ಹತ್ಯೆಹೀಡಾಗಿದ್ದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಅವರ ಮನೆಗೆ ಭೇಟಿ ನೀಡದಿರುವ ಬಗ್ಗೆ ಗೃಹ ಸಚಿವರು ಇಂದು ಕಾರಣ ತಿಳಿಸಿದ್ದಾರೆ.
ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್‌ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದರು. ಇದು ಒಂದು ಕೊಲೆ ಪ್ರಕರಣ. ಸುಹಾಸ್ ಶೆಟ್ಟಿ ಮೇಲೂ ಕೇಸ್‌ಗಳಿವೆ, ಐದು ಕೇಸ್‌ಗಳು ಅವರ ಮೇಲಿವೆ. ಹಾಗಾಗಿ, ನಾವು ಭೇಟಿ ಕೊಟ್ಟಿಲ್ಲ. ಆದರೆ, ಸುಹಾಸ್ ಶೆಟ್ಟಿ ಮನೆಗೆ ನ್ಯಾಯ ಕೊಡಿಸುವ ಕೆಲಸ ಸರ್ಕಾರ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ಹಿಂದೂ ಕಾರ್ಯರ್ಕನ ಕೊಲೆ ಪ್ರಕರಣದಲ್ಲಿ ಬಂಧಿತರು ನಿಜವಾದ ಆರೋಪಿಗಳಾ ಎಂಬ ಅನುಮಾನ ವ್ಯಕ್ತವಾಗ್ತಿರುವ ಕುರಿತು ಪ್ರತಿಕ್ರಿಯಿಸಿ, ಯಾರನ್ನೋ ಹೇಗೆ ಆರೋಪಿ ಅಂತ ಹೇಳಲು ಆಗುತ್ತಾ? ಕೊಲೆ ಪ್ರಕರಣದಲ್ಲಿ ಯರ‍್ಯಾರನ್ನೋ ಬಂಧಿಸಲು ಆಗಲ್ಲ ಎಂದು ತಿಳಿಸಿದರು.
ನಿನ್ನೆ ಮುಸ್ಲಿಂ ಸಮುದಾಯದ ಪ್ರಮುಖರು ಅವರೇ ಬಂದು ನನ್ನ ಭೇಟಿ ಮಾಡಿದ್ರು. ಬರೋರಿಗೆ ಬೇಡ ಅನ್ನೋಕ್ಕಾಗುತ್ತಾ? ಬೇರೆ ಸಮುದಾಯದವರೂ ಬರಬಹುದಿತ್ತು. ಯಾರೂ ಬರಲಿಲ್ಲ ಎಂದರು.