ಬೆಂಗಳೂರು:- ಹನಿಟ್ರ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ CID ತಂಡ ತನಿಖೆ ಚುರುಕುಗೊಳಿಸಿದೆ.
ಬಿಎಂಟಿಎಫ್‌ಗೆ ದೂರು ನೀಡಿದ್ದಕ್ಕೆ ಶಾಲಾ ಕಾಂಪೌಂಡ್ ಧ್ವಂಸ!? FIR ದಾಖಲು!
ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ರಾಜಣ್ಣರ ಮನೆ, ಕಚೇರಿಗಳಿಗೆ ಭೇಟಿ ನೀಡಿ ತನಿಖಾ ತಂಡ ಪರಿಶೀಲಿಸಿದ್ದು, ಮನೆ, ಚಾಲಕರು, ಕಚೇರಿ ಸಿಬ್ಬಂದಿಯನ್ನೂ ವಿಚಾರಣೆ ನಡೆಸಿದೆ. ಇಂದು ಪ್ರಕರಣ ಸಂಬಂಧ ಸಚಿವ ರಾಜಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.
ಪ್ರಕರಣದ ಬಗ್ಗೆ ಮಾಹಿತಿ ನೀಡುವಂತೆ CID ಸೂಚನೆ ನೀಡಿದ್ದು, ಇಂದು ವಿಚಾರಣೆಗೆ ಹಾಜರಾಗುವಂತೆ ಮೌಖಿಕ ಸೂಚನೆ ಕೊಟ್ಟಿದೆ. ಹೀಗಾಗಿ ಇವತ್ತು ಸಚಿವ ರಾಜಣ್ಣ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.