ಚಿತ್ರದುರ್ಗ: ಲಾರಿ ಹಾಗೂ ಎರಿಟಿಗಾ ಕಾರು ನಡುವೆ ಡಿಕ್ಕಿಯಾಗಿ 3 ಜನ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲ್ಲೂಕು ಹಳೆಹಳ್ಳಿ ಬಳಿ ನಡೆದಿದೆ. ಆಂದ್ರಾ ಮೂಲದ ಸುನಿತ (34) ಶ್ಯಾಂ ಬಾಬು (19) ಶಿವ ನಾಗಲು (60) ಮೃತ ದುರ್ದೈವಿಗಳಾಗಿದ್ದು,
ವಿಜ್ಞಾನಿಗಳನ್ನೇ ಅಚ್ಚರಿಗೊಳಿಸಿದೆ ಈ ಹಣ್ಣು..! ಎಷ್ಟೇ ಗಂಭೀರ ಕಾಯಿಲೆಯಾಗಿದ್ರೂ ಅದರಿಂದ ಸಿಗಲಿದೆ ಮುಕ್ತಿ
ಮೃತರು ಆಂದ್ರಪ್ರದೇಶದ ಗುಂಟೂರು ಜಿಲ್ಲೆ ವೆಲ್ಲಂ ಪಾಳ್ಯಂ ಮೂಲದವರು ಎಂದು ತಿಳಿದು ಬಂದಿದೆ. ಚಿತ್ರದುರ್ಗದಿಂದ ಹೊಳಲ್ಕೆರೆ ಕಡೆಗೆ ತೆರಳುತ್ತಿತ್ತು. ಈ ವೇಳೆ ಅಪಘಾತ ನಡೆದಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಹೊಳಲ್ಕೆರೆ ಠಾಣೆ ಪೊಲಿಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರಿನಲ್ಲಿದ್ದ ಮೃತದೇಹಗಳನ್ನು ಹೊರಗೆ ತೆಗೆದು ಹೊಳಲ್ಕೆರೆಯ ಶವಾಗಾರಕ್ಕೆ ಸಾಗಿಸಲಾಗಿದೆ.