ತುಮಕೂರು: ಕಾರಿನ ಟೈಯರ್ ಬ್ಲಾಸ್ಟ್ ಆಗಿ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿದೆ. ಭೀಕರ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ತುಮಕೂರು ಜಿಲ್ಲೆ ಪಾವಗಡ ಪಟ್ಟಣದ ಎಂ.ಜಿ ಸರ್ಕಲ್ ನಲ್ಲಿ ಘಟನೆ ಜರುಗಿದೆ. ಮಾರುತಿ ಸುಜುಕಿ ಬೊಲೆನೋ ಕಾರಿನಲ್ಲಿ ಬರುತ್ತಿದ್ದ ವೇಳೆ,
ಕಾರಿನ ಟೈಯರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿ, ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಪಲ್ಟಿ ಹೊಡೆದಿದೆ. ಕಾರಿನಲ್ಲಿದ್ದ ನಾಗಮೋಹನ ರೆಡ್ಡಿ ಹಾಗೂ ಮತ್ತೊಬ್ಬನಿಗೆ ಗಂಭೀರ ಗಾಯವಾಗಿದೆ. ಪಾವಗಡ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಚಿಕಿತ್ಸೆಗಾಗಿ ತುಮಕೂರು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಡಯೆಟ್ ಗೆ ಹೇಳಿ ಗುಡ್ ಬಾಯ್: ಬೆಳಗ್ಗೆ ದೋಸೆ-ಇಡ್ಲಿ ತಿಂದೇ ಸ್ಲಿಮ್ ಆಗಬಹುದು! ಹೇಗೆ ಅಂತೀರಾ?
ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ತಡರಾತ್ರಿ 12 ಗಂಟೆ ಸುಮಾರಿಗೆ ಘಟನೆ ಜರುಗಿದೆ. ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಘಟನೆ ಸಂಬಂಧ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.