ಉತ್ತರ ಪ್ರದೇಶ: ಉತ್ತರ ಪ್ರದೇಶದ ಸಂಭಾಲ್ ಜಿಲ್ಲೆಯಲ್ಲಿ ಭೀಕರ ಅಪಘಾತ ಸಂಭವಿಸಿದೆ. ಬೊಲೆರೊ ಎಸ್‌ಯುವಿ ಕಾರು ಕಾಲೇಜಿನ ಗೋಡೆಗೆ ಡಿಕ್ಕಿ ಹೊಡೆದ ರಭಸಕ್ಕೆ ವರ ಸೇರಿದಂತೆ ಒಂದೇ ಕುಟುಂಬದ 8 ಮಂದಿ ಸಾವನ್ನಪ್ಪಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಜೇವಾನೈ ಗ್ರಾಮದಲ್ಲಿ ಈ ಘಟನೆ ಸಂಭವಿಸಿದೆ. ಜನತಾ ಇಂಟರ್ ಕಾಲೇಜು ಬಳಿ ಚಾಲಕನ ನಿಯಂತ್ರಣ ತಪ್ಪಿದಾಗ ಬೊಲೆರೊ ಕಾರು ಅತಿ ವೇಗದಲ್ಲಿ ಚಲಿಸುತ್ತಿತ್ತು ಎಂದು ವರದಿಯಾಗಿದೆ. ವಾಹನವು ಗೋಡೆಗೆ ಡಿಕ್ಕಿ ಹೊಡೆದು ನಂತರ ಪಲ್ಟಿಯಾಗಿದೆ.
ಕುಂಬಳಕಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಕಣ್ಣು, ಚರ್ಮ, ಕೂದಲು ಎಲ್ಲದಕ್ಕೂ ಮದ್ದು!
ವಾಹನದಲ್ಲಿ ಹತ್ತು ಜನರು ಇದ್ದರು. ಅವರೆಲ್ಲರೂ ಒಂದೇ ಕುಟುಂಬದ ಸದಸ್ಯರು. ಮದುವೆ ಸಮಾರಂಭಕ್ಕೆ ಹೋಗುತ್ತಿದ್ದರು. ಸ್ಥಳದಲ್ಲೇ ಮೃತಪಟ್ಟವರಲ್ಲಿ ವರ ಸೂರಜ್ ಕೂಡ ಸೇರಿದ್ದಾರೆ. ಸಂಭಾಲ್‌ನ ಹರ್ ಗೋವಿಂದಪುರ ಗ್ರಾಮದಿಂದ ನೆರೆಯ ಬುಡೌನ್ ಜಿಲ್ಲೆಯ ಸಿರ್ತೌಲ್‌ನಲ್ಲಿರುವ ವಧುವಿನ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದರು.
ಅಪಘಾತದ ತೀವ್ರತೆಗೆ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಗಂಭೀರ ಗಾಯಗೊಂಡಿದ್ದ ಇತರ ಮೂವರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬದುಕುಳಿದ ಇಬ್ಬರು ಗಂಭೀರ ಸ್ಥಿತಿಯಲ್ಲಿದ್ದಾರೆ. ಅವರನ್ನು ಅಲಿಘರ್‌ನ ಉನ್ನತ ವೈದ್ಯಕೀಯ ಕೇಂದ್ರಕ್ಕೆ ರವಾನಿಸಲಾಗಿದೆ.