ಹುಬ್ಬಳ್ಳಿ: ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಶ್ವೇತ (29), ಅಂಜಲಿ(26), ಸಂದೀಪ್ (26), ವಿಠ್ಠಲ (55) ಮತ್ತು ಶಶಿಕಲಾ ಮೃತರು.
ಮನೆಯ ಕೀ ಎಲ್ಲಿಡುತ್ತಿದ್ದೀರಾ!? ಈ ದಿಕ್ಕಿನಲ್ಲಿ ಇಡಲೇಬಾರದಂತೆ! ಜ್ಯೋತಿಷ್ಯ ಹೇಳುವುದು ಹೀಗೆ!
ಇವರೆಲ್ಲರೂ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನವರು ಎಂದು ತಿಳಿದುಬಂದಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿರುವ ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರು, ಮೃತದೇಹಗಳನ್ನು ಹುಬ್ಬಳ್ಳಿಯ ಕಿಮ್ಸ್ ಗೆ ರವಾನೆ ಮಾಡಿದ್ದಾರೆ.
ಹೋಟೆಲ್ ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದ ಸಮಯದಲ್ಲಿ ಈ ದುರ್ಘಟನೆ ನಡೆದಿದೆ. ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.