ಬೆಂಗಳೂರು: ಐದು ಗ್ಯಾರಂಟಿಗಾಗಿ ಕರ್ನಾಟಕದ ಮನೆ ಮನೆ ಲೂಟಿ ಆಗ್ತಿದೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಆರೋಪಿಸಿದ್ದಾರೆ. ನಗರದ ಫ್ರೀಡಂ ಪಾರ್ಕ್ ನಲ್ಲಿ ನಡೆದ ಆಹೋರಾತ್ರಿ ಧರಣಿಯಲ್ಲಿ ಭಾಗಿಯಾಗಿ ಮಾತನಾಡಿದ ಅವರು,
ಬಜೆಟ್ ನಲ್ಲಿ ಯಾವುದೇ ತೆರಿಗೆ ತೋರಿಸದೆ ಇದೀಗ ಬೆಲೆ ಏರಿಕೆ ಮಾಡಲಾಗ್ತಿದೆ. ಐದು ಗ್ಯಾರಂಟಿಗಾಗಿ ಕರ್ನಾಟಕದ ಮನೆ ಮನೆ ಲೂಟಿ ಆಗ್ತಿದೆ ಎಂದು ಆರೋಪಿಸಿದರು.
ಸಚಿವರು ಅಂಗಡಿ ತೆರೆದಿದ್ದಾರೆ. 40% ಆರೋಪಕ್ಕೆ ಸಾಕ್ಷಿ ಇಲ್ಲ. ಆದರೆ ಕಾಂಗ್ರೆಸ್ ಸರ್ಕಾರ 60% ಕಮಿಷನ್ ಪಡೆದುಕೊಳ್ಳುತ್ತಿದೆ. ಸ್ಮಾರ್ಟ್ ಮೀಟರ್ ನಲ್ಲಿ 15,000 ಹಗರಣ ನಡೆದಿದೆ. ಸಿದ್ದರಾಮಯ್ಯ ಹೆಸರಿಗಷ್ಟೇ ಸಿಎಂ. ಸರ್ಕಾರದ ಗಾಲಿ ಕುರ್ಚಿಯಲ್ಲಿದೆ ಎಂದು ಕಿಡಿಕಾರಿದರು.