ವಿಜಯಪುರ: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನಲ್ಲಿ ಭೂಕಂಪನದ ಅನುಭವವಾಗಿದೆ. ಇದ್ದಕ್ಕಿದ್ದಂತೆ ಜೋರಾದ ಶಬ್ದ ಕೇಳಿಸಿದ್ದು, ಜನರು ಗಾಬರಿಗೊಂಡು ಮನೆಯಿಂದ ಹೊರಗೆ ಓಡೋಡಿ ಬಂದಿದ್ದಾರೆ.
ತಿಕೋಟಾ ತಾಲೂಕಿನ ಸೋಮದೇವರಹಟ್ಟಿ, ಮಲಕನದೇರಹಟ್ಟಿ, ಹುಬನೂರ, ಟಕ್ಕಳಕಿ, ಘೋಣಸಗಿ, ಕಳ್ಳಕವಟಗಿ, ಬಾಬಾ ಪ್ರದೇಶದಲ್ಲಿ ಭೂಮಿ ಕಂಪಿಸಿದ ಅನುಭವಿಸಿದ ಅನುಭವವಾಗಿದೆ. ಮಧ್ಯಾಹ್ನ 2:14ರಿಂದ 2:15 ಸಮಯದಲ್ಲಿ ಭೂಮಿಯಿಂದ ಜೋರಾದ ಶಬ್ದವಾಗಿದೆ.
ಲಂಚಕ್ಕೆ ಬೇಡಿಕೆ ಆರೋಪ ; ಬೆಳಗಾವಿಯಲ್ಲಿ ಪೊಲೀಸ್ ಅಧಿಕಾರಿಯ ವಿರುದ್ಧವೇ ಪ್ರತಿಭಟನೆ
ಕಳೆದ ವರ್ಷ ಇದೇ ರೀತಿ ನಾಲ್ಕೈದು ಬಾರಿ ಭೂಮಿ ಕಂಪಿಸಿದ ಘಟನೆ ನಡೆದಿತ್ತು. ಈ ವರ್ಷ ಇದೇ ಮೊದಲ ಭೂಕಂಪನ ಅನುಭವವಾಗಿದೆ. ಭೂಮಿ ಕಂಪಿಸಿದ್ದರಿಂದ ಜನರಲ್ಲಿ ಆತಂಕ ಸೃಷ್ಟಿಯಾಗಿದೆ.