ಬೆಂಗಳೂರು: ಕೆಎಸ್ಡಿಎಲ್ ರಾಯಭಾರಿಯಾಗಿ ತಮನ್ನಾ ಭಾಟಿಯಾ ನೇಮಕ ಮಾಡಿರುವುದಕ್ಕೆ ಭಾರೀ ವಿರೋಧ ವ್ಯಕ್ತವಾಗಿದೆ. ಈ ಬಗ್ಗೆ ಮಾತನಾಡಿದ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಮಾತನಾಡಿ, ನಾನು ಈ ಖಾತೆಯನ್ನು ವಹಿಸಿಕೊಂಡ ಮೇಲೆ ಕೆಎಸ್ಡಿಎಲ್ನಲ್ಲಿ ಉತ್ಪಾದನೆ ಶೇಕಡ 40ರಷ್ಟು ಹೆಚ್ಚಾಗಿದೆ. ಈ ನಿಟ್ಟಿನಲ್ಲಿ ನಾವೇನೂ ಹೊಸ ಯಂತ್ರೋಪಕರಣಗಳನ್ನು ಖರೀದಿಸಿಲ್ಲ. ಜತೆಗೆ ಎಫ್ ಎಂಸಿಜಿ ವಲಯದಲ್ಲಿ ಸಂಸ್ಥೆಯ ಬೆಳವಣಿಗೆ ಶೇಕಡ 15ರಷ್ಟಿದೆ. ಈ ವಿಚಾರದಲ್ಲಿ ಗೋದ್ರೇಜ್ (ಶೇ.11), ಹಿಂದೂಸ್ತಾನ್ ಲಿವರ್ಸ್ (ಶೇ 9), ಐಟಿಸಿ (ಶೇಕಡ 8), ವಿಪ್ರೋ (ಶೇಕಡ 7) ಮುಂತಾದ ಉದ್ದಿಮೆಗಳನ್ನೂ ಕೆಎಸ್ಡಿಎಲ್ ಹಿಂದಿಕ್ಕಿದೆ.
ನಾವು ಕೆಎಸ್ಡಿಎಲ್ ವಹಿವಾಟನ್ನು ಮುಂದಿನ ಮೂರು ವರ್ಷಗಳಲ್ಲಿ 5,000 ಕೋಟಿ ರೂ.ಗೆ ತೆಗೆದುಕೊಂಡು ಹೋಗಲು ನಿರ್ಧರಿಸಿದ್ದೇವೆ. ಆಗ ಹಾಲಿವುಡ್ ನಟಿಯೊಬ್ಬರನ್ನೇ ಪ್ರಚಾರ ರಾಯಭಾರಿಯನ್ನಾಗಿ ಮಾಡಿಕೊಳ್ಳಬೇಕಾಗುತ್ತದೆ. ಅಂತಹ ಪರಿಸ್ಥಿತಿ ಬರಲೆಂದು ನಾನು ಆಶಿಸುತ್ತೇನೆ ಎಂದಿದ್ದಾರೆ.
ಹೊಸ ಬಟ್ಟೆ ಬಣ್ಣ ಬಿಡುತ್ತೆ ಅನ್ನೋ ಭಯ ಇದ್ದರೆ ಈ ಟ್ರಿಕ್ಸ್ ಟ್ರೈ ಮಾಡಿ ನೋಡಿ! ರಿಸಲ್ಟ್ ಪಕ್ಕಾ
ತಮನ್ನಾ ಭಾಟಿಯಾ ಅವರನ್ನು ನೇಮಿಸಿಕೊಳ್ಳುವ ಮೊದಲು ನಾವು ಕನ್ನಡದವರೇ ಆದ ದೀಪಿಕಾ ಪಡುಕೋಣೆ ಮತ್ತು ರಶ್ಮಿಕಾ ಮಂದಣ್ಣ ಅವರನ್ನು ಸಂಪರ್ಕಿಸಿದೆವು. ಜೊತೆಗೆ ಶ್ರೀಲೀಲಾ, ಪೂಜಾ ಹೆಗಡೆ, ಕಿಯಾರ ಅಡ್ವಾಣಿ ಅವರನ್ನೂ ಕೇಳಲಾಗಿದೆ. ದೀಪಿಕಾ ಅವರು ಅವರದೇ ಉತ್ಪನ್ನಗಳ ಪ್ರಚಾರದಲ್ಲಿ ಇದ್ದಾರೆ. ಹೀಗಾಗಿ ಬರಲಿಲ್ಲ. ಉಳಿದವರು ಬೇರೆ ಬೇರೆ ಸೌಂದರ್ಯವರ್ಧಕಗಳು, ಕ್ರೀಮ್ಗಳು ಮತ್ತು ಸಾಬೂನುಗಳಿಗೆ ರೂಪದರ್ಶಿಗಳಾಗಿ ಕೆಲಸ ಮಾಡುತ್ತಿದ್ದಾರೆ.
ಹೀಗಾಗಿ ಮುಂದಿನ ಎರಡು ವರ್ಷ ಅವರು ಬಿಡುವಿಲ್ಲ ಎಂದು ತಿಳಿಸಿದರು. ಹೀಗಾಗಿ, ಸೋಶಿಯಲ್ ಮೀಡಿಯಾ ವೇದಿಕೆಗಳಲ್ಲಿ 28 ಮಿಲಿಯನ್ ಫಾಲೋಯರ್ಸ್ ಹೊಂದಿರುವ ಮನ್ನಾ ಭಾಟಿಯಾ ಅವರನ್ನು ಅವರ ಅಖಿಲ ಭಾರತೀಯ ಮಟ್ಟದ ವರ್ಚಸ್ಸನ್ನು ನೋಡಿ ನೇಮಿಸಿಕೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಕೆಎಸ್ಡಿಎಲ್ ಮೂಲಕ ಇತ್ತೀಚೆಗೆ 21 ಹೊಸ ಉತ್ಪನ್ನ ಬಿಡುಗಡೆ ಮಾಡಲಾಗಿದೆ. ಸದ್ಯದಲ್ಲೇ ನಾವು ಪರ್ಫ್ಯೂಮ್ ಕ್ಷೇತ್ರಕ್ಕೂ ಕಾಲಿಡುತ್ತಿದ್ದೇವೆ. ಇದಕ್ಕಾಗಿ ನಮ್ಮ ಅಧಿಕಾರಿಗಳನ್ನು ಉತ್ತರಪ್ರದೇಶದ ಕನೌಜ್ಗೂ ಕಳಿಸಿಕೊಡಲಾಗಿತ್ತು. ವ್ಯಾಪಾರದ ಪ್ರಶ್ನೆ ಬಂದಾಗ ನಾವು ಅದಕ್ಕೆ ತಕ್ಕ ಕಾರ್ಯತಂತ್ರವನ್ನೇ ರೂಪಿಸಬೇಕಾಗುತ್ತದೆ. ಬ್ರ್ಯಾಂಡ್ ಅಂಬಾಸಿಡರ್ ನೇಮಕವನ್ನು ತಪ್ಪಾಗಿ ಭಾವಿಸಬಾರದು. ನಾವು ಅಧಿಕಾರಕ್ಕೆ ಬಂದ ಮೇಲೆ, ಕೆಎಸ್ಡಿಎಲ್ ವಹಿವಾಟು 1,700 ಕೋಟಿ ರೂ.ಗೂ ಹೆಚ್ಚಾಗಿದೆ. ಇದರ ಪೈಕಿ ರಾಜ್ಯದಲ್ಲಿ ನಡೆದಿರುವ ವಹಿವಾಟಿನ ಮೊತ್ತ 320 ಕೋಟಿ ರೂ. ಆಸುಪಾಸಿನಲ್ಲಿದೆಯಷ್ಟೆ ಎಂದು ತಿಳಿಸಿದ್ದಾರೆ.