ಮೈಸೂರು: ನನಗೆ 75 ವರ್ಷ ಆಯ್ತು, ಮುಂದೆ ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಆದರೆ ಸಹಕಾರಿ ಕ್ಷೇತ್ರ, ಸಕ್ರೀಯ ರಾಜಕಾರಣದಲ್ಲಿ ಇರುತ್ತೇನೆ ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಹೇಳುವ ಮೂಲಕ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಹೇಳಿದ್ದಾರೆ.
ಮೈಸೂರಿನಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು, ನನಗೆ ಈಗಾಗಲೇ 75 ವರ್ಷವಾಗಿದೆ. ಹೀಗಾಗಿ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸುವ ಆಲೋಚನೆಯಿಲ್ಲ. ಯುವಕರಿಗೆ ಅವಕಾಶ ಸಿಗಬೇಕು ಎನ್ನುವ ನಿಟ್ಟಿನಲ್ಲಿ ಈ ತೀರ್ಮಾನ ಕೈಗೊಂಡಿದ್ದೇನೆ.
ಕಿಡ್ನಿ ಸ್ಟೋನ್ ನೋವಿಲ್ಲದೇ ಕರಗಿ ಹೋಗ್ಬೇಕಾ!? ಹಾಗಿದ್ರೆ ಖಾಲಿ ಹೊಟ್ಟೆಯಲ್ಲಿ ಈ ಜ್ಯೂಸ್ ಕುಡಿರಿ, ರಿಸಲ್ಟ್ ಗ್ಯಾರಂಟಿ!
ಆದರೆ, ಸಹಕಾರಿ ಕ್ಷೇತ್ರ ಹಾಗೂ ಸಕ್ರೀಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ ಎಂದು ತಮ್ಮ ನಿರ್ಧಾರವನ್ನು ಸ್ಪಷ್ಟಪಡಿಸಿದರು. ಚುನಾವಣೆಗೆ ನಿಲ್ಲದೆ ಸಹಕಾರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತೇನೆ. ಸಹಕಾರಿ ಸಂಸ್ಥೆಗಳ ಅಭಿವೃದ್ಧಿಗೆ ಮುಂದುವರೆಯುವೆ ಎಂದು ಹೇಳಿದರು.