ಬೆಂಗಳೂರು:- ನಾನು ಬಿಜೆಪಿ ಶಿಸ್ತಿನ ಸಿಪಾಯಿ, ಶಿಸ್ತು ಸಮಿತಿ ನೋಟಿಸ್ಗೆ ಉತ್ತರ ಕೊಟ್ಟಿದ್ದೇನೆ ಎಂದು ರೇಣುಕಾಚಾರ್ಯ ಹೇಳಿದ್ದಾರೆ.
Panchacharya Shri Award: ಬನ್ನೂರು ಶ್ರೀಗಳಿಗೆ ಪಂಚಾಚಾರ್ಯ ಶ್ರೀ ಪ್ರಶಸ್ತಿ!
ಈ ಸಂಬಂಧ ಮಾತನಾಡಿದ ಅವರು, ನಾನು ಬಿಜೆಪಿ ಶಿಸ್ತಿನ ಸಿಪಾಯಿಯಾಗಿದ್ದು ಕೇಂದ್ರೀಯ ಶಿಸ್ತು ಸಮಿತಿ ನೀಡಿದ ನೋಟಿಸ್ಗೆ ಉತ್ತರ ನೀಡಿದ್ದೇನೆ. ನಾನು ರಾಷ್ಟ್ರೀಯ ನಾಯಕರ ಬಗ್ಗೆ ಎಲ್ಲಿಯೂ ಮಾತನಾಡಿಲ್ಲ. ಯಡಿಯೂರಪ್ಪ, ರಾಜ್ಯಾಧ್ಯಕ್ಷರ ಬಗ್ಗೆ ಮಾತನಾಡಿದ್ದಕ್ಕೆ ನಾನು ಮಾತನಾಡಿದ್ದೇನೆ ಅಷ್ಟೇ. ಯಡಿಯೂರಪ್ಪ ವಿರುದ್ಧ ಸದನದ ಒಳಗೆ, ಹೊರಗೆ ಮಾತನಾಡಿ ಅಪಮಾನ ಮಾಡಿದ್ದರು. ಅದು ರಾಷ್ಟ್ರೀಯ ನಾಯಕರ ಬಗ್ಗೆ ಮಾತನಾಡಿದಂತೆ ಎಂದರು.
ನಾನು ಪಕ್ಷಕ್ಕೆ ಮುಜುಗರ ತಂದಿಲ್ಲ, ರಾಷ್ಟ್ರೀಯ ನಾಯಕರಿಗೂ ಮುಜುಗರ ತಂದಿಲ್ಲ. ಅನಿವಾರ್ಯ ಸಂದರ್ಭದಲ್ಲಿ ಮಾತ್ರ ಮಾತನಾಡಿದ್ದೇನೆ. ಸಂಘಟನೆ ಮಾತೃ ಸಮಾನ. ನಾನು ಯಾವತ್ತೂ ಪಕ್ಷ ಸಂಘಟನೆ ವಿರುದ್ಧ ಮಾತನಾಡುವುದಿಲ್ಲ ಎಂದರು.