Close Menu
Ain Live News
    Facebook X (Twitter) Instagram YouTube
    Monday, July 7
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    BIG BREAKING: ಯತ್ನಾಳ್‌ ಉಚ್ಚಾಟನೆ ದುರದೃಷ್ಟಕರವೆಂದು ದುಃಖಿಸುತ್ತೇನೆ: ರೆಬೆಲ್ಸ್‌ ಗೆ ಗುಮ್ಮಿದ ವಿಜಯೇಂದ್ರ..!

    By Author AINMarch 26, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಕಡೆಗೂ ತಮ್ಮ ವಿರುದ್ಧವೇ ತೊಡೆತಟ್ಟಿದ್ದ ರೆಬೆಲ್ ಬಣ ನಾಯಕರಿಗೆ ಯತ್ನಾಳ್‌ ಉಚಾಟನೆ ಮೂಲಕ ಎಚ್ಚರಿಕೆ ಸಂದೇಶ ರವಾನಿಸುವಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಯಶಸ್ವಿಯಾಗಿದ್ದಾರೆ.

    ರೆಬೆಲ್ ಟೀಂನ ಬಸನಗೌಡ ಪಾಟೀಲ್ ಯತ್ನಾಳ್‌ಗೆ ಉಚ್ಚಾಟನೆ ಶಿಕ್ಷೆ ಕೊಡಿಸಿರುವ ವಿಜಯೇಂದ್ರ,‌ ಎಕ್ಸ್‌ ಖಾತೆಯಲ್ಲಿ ಟ್ವೀಟ್ ಮೂಲಕ ಗುಮ್ಮಿದ್ದಾರೆ.

    ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ. ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ ಅನ್ನೋ ಮೂಲಕ ಹಿಗ್ಗಾಮುಗ್ಗ ಝಾಡಿಸಿದ್ದಾರೆ.

    ವಿಜಯೇಂದ್ರ ಟ್ವೀಟ್‌ ನಲ್ಲೇನಿದೆ..

    ಭಾರತೀಯ ಜನತಾ ಪಾರ್ಟಿ, ಲಕ್ಷಾಂತರ ಕಾರ್ಯಕರ್ತರನ್ನು ಹೊಂದುವ ಮೂಲಕ ವಿಶ್ವದಲ್ಲಿ ಅಗ್ರಮಾನ್ಯತೆ ಪಡೆದಿರುವ ರಾಜಕೀಯ ಪಕ್ಷ. ಸಂಘ ಸಂಸ್ಕಾರ ಪಡೆದಿರುವ ಸಮರ್ಪಣಾ ಮನೋಭಾವದ ಕಾರ್ಯಕರ್ತರ ಬೆವರ ಪರಿಶ್ರಮದಿಂದ ಸಮೃದ್ಧ ವೃಕ್ಷದಂತೆ ಬೆಳೆದಿರುವ ಪಕ್ಷದಲ್ಲಿ ಶಿಸ್ತು-ತ್ಯಾಗಕ್ಕೆ ಮೊದಲ ಆದ್ಯತೆ. ಪಕ್ಷದ ಹಿರಿಯರು ಹಾಗೂ ವರಿಷ್ಠರು ಈ ವಿಷಯದಲ್ಲಿ ಎಂದಿಗೂ ರಾಜಿ ಮಾಡಿಕೊಂಡಿರುವ ಉದಾಹರಣೆ ನಮ್ಮ ಮುಂದಿಲ್ಲ,

    https://x.com/BYVijayendra/status/1904869605988065584?s=08

    ಸದ್ಯ @BasanagoudaBJPರವರ ವಿರುದ್ಧದ ಶಿಸ್ತುಕ್ರಮ ವರಿಷ್ಠರು ಸುದೀರ್ಘ ಅವಧಿಯಿಂದ ಸ್ಥಿತಿ-ಗತಿಗಳನ್ನು ಅವಲೋಕಿಸಿ ಅನಿವಾರ್ಯವಾಗಿ ತೆಗೆದುಕೊಂಡಿರುವ ಕ್ರಮವಾಗಿರುತ್ತದೆ. ಪಕ್ಷದ ಬೆಳವಣಿಗೆಯಲ್ಲಿನ ಕಹಿ ಘಟನೆಗಳನ್ನು ಉಲ್ಲೇಖಿಸಿ ಪಕ್ಷದ ವರಿಷ್ಠರಿಗೆ ನಾನು ಎಂದೂ ದೂರುಗಳನ್ನು ಹೇಳಿಕೊಂಡಿಲ್ಲ, ದಾಖಲಿಸಿಯೂ ಇಲ್ಲ. ಪೂಜ್ಯ ತಂದೆ ಯಡಿಯೂರಪ್ಪನವರು ಎಲ್ಲರನ್ನೂ ಸಮಚಿತ್ತ ಭಾವದಿಂದ ನೋಡಿ, ಪಕ್ಷವನ್ನು ಕುಟುಂಬದಂತೆ ಬೆಳೆಸಿದ ಮಾದರಿಯಲ್ಲಿಯೇ ನಡೆಯಬೇಕೆಂಬ ಸಂಕಲ್ಪ ಹೊತ್ತು, ಸಂಘದ ಹಿರಿಯರು ಮತ್ತು ಪಕ್ಷದ ಹಿರಿಯರ ಮಾರ್ಗದರ್ಶನದಲ್ಲಿ ಮುನ್ನಡೆಯುತ್ತಿದ್ದೇನೆ. ಕೆಲ ದಿನಗಳ ಹಿಂದೆ ನಡೆದ ಕಹಿ ಪ್ರಸಂಗಗಳಿಂದ ಎಂದಿಗೂ ನಾನು ಉದ್ವೇಗಗೊಳ್ಳಲಿಲ್ಲ, ಯಾರೊಂದಿಗೂ ದುಃಖ ತೋಡಿಕೊಂಡಿಲ್ಲ, ಸಮರ್ಪಣೆ-ತ್ಯಾಗದ ಪಾಠವನ್ನು ಹೇಳಿಕೊಡುವ ಸಂಸ್ಕಾರವಂತ ಸಂಘಟನೆಯ ವ್ಯವಸ್ಥೆಯಲ್ಲಿ ಬೆಳೆದು ಬಂದ ನಾನು ಸಹನೆ-ತಾಳ್ಮೆಯನ್ನು ಜವಾಬ್ದಾರಿ ನಿರ್ವಹಿಸುವ ನಿಟ್ಟಿನಲ್ಲಿ ಆಧಾರ ಸ್ಥಂಭವೆಂದು ಪರಿಗಣಿಸಿ ಮುನ್ನಡಿದಿದ್ದೇನೆ. ಈ ನಿಟ್ಟಿನಲ್ಲಿ ವರಿಷ್ಠರು ತೆಗೆದುಕೊಂಡಿರುವ ಶಿಸ್ತು ಕ್ರಮವನ್ನು ನಾನು ಸಂಭ್ರಮಿಸಲಾರೆ ಬದಲಾಗಿ ಈ ಬೆಳವಣಿಗೆಯನ್ನು ದುರದೃಷ್ಟಕರವೆಂದು ದುಃಖಿಸುತ್ತೇನೆ. ವಿಶ್ವಾಸ ರಾಜಕಾರಣವನ್ನು ಎಲ್ಲರೊಡಗೂಡಿ ಮುಂದುವರೆಸಿ ಪಕ್ಷ ಸಂಘಟನೆಗೆ ಕಟ್ಟಕಡೆಯ ಕಾರ್ಯಕರ್ತರನ್ನೂ ಅಣಿಗೊಳಿಸುವ ನಿಟ್ಟಿನಲ್ಲಿ ಮುನ್ನಡೆಯಲಿದ್ದೇನೆ. ಭವಿಷ್ಯದಲ್ಲಿಯೂ ನಾನು ನಡೆಯುವ ಹಾದಿಯಲ್ಲಿ ಎಲ್ಲಾದರೂ ಎಡವಿದರೆ, ಅದನ್ನು ತಿದ್ದಿ ತೀಡುವ ಅಧಿಕಾರ ಪಕ್ಷದ ಹಿರಿಯರೆಲ್ಲರಿಗೂ ಇದ್ದೇ ಇದೆ. ಎಲ್ಲರೂ ಸೇರಿ ರಚನಾತ್ಮಕ ಸಲಹೆಗಳನ್ನು ಸ್ವೀಕರಿಸಿ ಪಕ್ಷವನ್ನು ಮುನ್ನಡೆಸೋಣ, ಭ್ರಷ್ಟಾಚಾರ ಹಾಗೂ ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಜನವಿರೋಧಿ ಕಾಂಗ್ರೆಸ್ ಸರ್ಕಾರವನ್ನು ಅಧಿಕಾರದಿಂದ ಕೆಳಗಿಳಿಸಿ, ಸಮೃದ್ಧ ಕರ್ನಾಟಕವನ್ನು ಕಟ್ಟುವ ನಿಟ್ಟಿನಲ್ಲಿ ವಿಕಸಿತ ಭಾರತದ ಸಂಕಲ್ಪ ಹೊತ್ತ ಮಾನ್ಯ ಪ್ರಧಾನಿ ನರೇಂದ್ರ ಮೋದಿ ಜೀ ಅವರಿಗೆ ಹೆಗಲು ಕೊಡೋಣ, ಪಕ್ಷದ ವರಿಷ್ಟರ ನಿರೀಕ್ಷೆಯ ಗುರಿ ತಲುಪೋಣ.

    ಬಿ.ವೈ ವಿಜಯೇಂದ್ರ

    Demo
    Share. Facebook Twitter LinkedIn Email WhatsApp

    Related Posts

    ಸೋಮವಾರ ಈ ಬಣ್ಣ ಧರಿಸಿದ್ರೆ ಒಳ್ಳೆಯದಂತೆ.. ಆದ್ರೆ ಈ ತಪ್ಪು ಮಾಡಬಾರದು ಪಾಪ ಗ್ಯಾರಂಟಿ!

    July 7, 2025

    ನಾನೊಬ್ಬ ಸ್ವಾಭಿಮಾನಿ.. ದುರಹಂಕಾರಿ ಅಂದ್ರೂ ಡೋಂಟ್ ಕೇರ್: ಸಿದ್ದರಾಮಯ್ಯ!

    July 6, 2025

    ನಮ್ಮ ಮೆಟ್ರೋ ವಿರುದ್ಧ ಕಾನೂನು ಸಮರ: ಕೋರ್ಟ್ ಮೂಲಕ ನ್ಯಾಯ ಕೇಳಲು ಮುಂದಾದ ಸಂಸದ ತೇಜಸ್ವಿ ಸೂರ್ಯ!

    July 6, 2025

    ಮುಸ್ಲಿಮರೇ ಇಲ್ಲದ ಊರಲ್ಲಿ ಮೊಹರಂ ಆಚರಣೆ: ಇದರ ಪ್ರಮುಖ ಕಾರಣ ನೀವು ತಿಳಿಯಲೇಬೇಕು!

    July 6, 2025

    ಒಬಿಸಿ ಸಲಹಾ ಮಂಡಳಿಯ ಅಧ್ಯಕ್ಷರಾಗಿ ಸಿದ್ದರಾಮಯ್ಯ ನೇಮಕ ವಿಚಾರ: ವದಂತಿಗೆ ತೆರೆ ಎಳೆದ CM ಕಚೇರಿ!

    July 6, 2025

    ಗೋದಾಮಿನಲ್ಲಿ ಅಗ್ನಿ ಅವಘಡ: ಬೆಂಕಿಯ ಕೆನ್ನಾಲಿಗೆಗೆ ಹೊತ್ತಿ ಉರಿದ ಬಟ್ಟೆಗಳು!

    July 6, 2025

    ಮತ್ತೊಂದು ಚೀಟಿ ಪಂಗನಾಮ: 600ಕ್ಕೂ ಹೆಚ್ಚು ಜನರನ್ನು ನಂಬಿಸಿ ರಾತ್ರೋರಾತ್ರಿ ಎಸ್ಕೇಪ್!

    July 6, 2025

    Siddaramaiah: ಒಬಿಸಿ ಸಲಹಾ ಮಂಡಳಿಗೆ “CM” ನೇಮಕ: ರಾಜ್ಯದಿಂದ ದೇಶದತ್ತ ಸಿದ್ದರಾಮಯ್ಯ ಪಯಣ?

    July 6, 2025

    ಬೆಂಗಳೂರಿನಲ್ಲಿ ಬೆಚ್ಚಿ ಬೀಳಿಸುವ ಅಪಘಾತ: ಡಿಕ್ಕಿಯ ರಭಸಕ್ಕೆ ಎರಡು ಪೀಸ್ ಆದ ಟೆಂಪೋ!

    July 6, 2025

    BBMP ಜಾಗದಲ್ಲಿ ಖಾಸಗಿ ವ್ಯಕ್ತಿಗಳದ್ದೆ ದರ್ಬಾರ್: ಗ್ಯಾರೇಜ್ ಮೆಟೆರಿಯಲ್ ಇಡಬೇಡ ಎಂದಿದ್ದಕ್ಕೆ ಹಲ್ಲೆ!

    July 6, 2025

    ಹಾರ್ಟ್ ಅಟ್ಯಾಕ್ ಭೂತ: ರಾಜ್ಯದಲ್ಲಿ ಒಂದೇ ದಿನ ಇಬ್ಬರು ಹೃದಯಾಘಾತಕ್ಕೆ ಬಲಿ..!

    July 6, 2025

    ಭೀಕರ ರಸ್ತೆ ಅಪಘಾತ: ಡಿವೈಡರ್​ಗೆ ಡಿಕ್ಕಿ ಹೊಡೆದು ಟೆಂಪೊ ಪೀಸ್-ಪೀಸ್!

    July 6, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.