ಮಂಡ್ಯ:- ಕುಮಾರಸ್ವಾಮಿ ಸಿಎಂ ಆಗಲು ನಾನು ಕಾರಣ, ಬೇಕಿದ್ರೆ ಧರ್ಮಸ್ಥಳದಲ್ಲಿ ಆಣೆ ಮಾಡ್ತೀನಿ ಎಂಬ ಸಚಿವ ಚಲುವರಾಯಸ್ವಾಮಿ ಹೇಳಿಕೆಗೆ HDK ತಿರುಗೇಟು ಕೊಟ್ಟಿದ್ದಾರೆ.
ದ್ವಿತೀಯ ಪಿಯುಸಿ ಫಲಿತಾಂಶ: ಪಾಸಾದವರಿಗೆ ವಿಶ್ ಮಾಡಿ, ಫೇಲ್ ಆದವರಿಗೆ ಧೈರ್ಯ ತುಂಬಿದ ಮುಖ್ಯಮಂತ್ರಿ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಾನು ಆಣೆ ಮಾಡಲು ತಯಾರಿದ್ದೇನೆ. ನಾನು ಸಿಎಂ ಆಗುವಾಗ ಚಲುವರಾಯಸ್ವಾಮಿ ನೋಡಿ ಎಂಎಲ್‌ಎಗಳು ಬಂದ್ರಾ ಏನು ಅಂತ. ಇದು ಸುಳ್ಳು ಚಲುವರಾಯಸ್ವಾಮಿಯನ್ನ ಮಂತ್ರಿ ಮಾಡಲು ಶ್ರಮ ಹಾಕಿದ್ದೇನೆ ಎಂದು ತಿಳಿಸಿದ್ದಾರೆ.
ತಾನು ಮಂತ್ರಿ ಆಗಲು ಚಲುವರಾಯಸ್ವಾಮಿ ಮಧ್ಯರಾತ್ರಿ ಮೂರು ಗಂಟೆವರೆಗೆ ನನ್ನನ್ನ ಬಿಟ್ಟಿಲ್ಲ. ಅವರನ್ನ ಮಂತ್ರಿ ಮಾಡಲು 50 ಜನ ಶಾಸಕರನ್ನು ಸೇರಿಸಿದ್ದೆ. ನಾನು ಪಟ್ಟಿರುವ ಶ್ರಮವನ್ನು ಚಲುವರಾಯಸ್ವಾಮಿ ಮರೆಯಬಾರದು ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ಇನ್ನೂ ಚಲುವರಾಯಸ್ವಾಮಿಗೆ ಇರುವ ಚಟಗಳು ನನಗೆ ಇಲ್ಲ, ಮಂಡ್ಯದಲ್ಲಿ ಕೇಳಿದ್ರೆ ಚಲುವರಾಯಸ್ವಾಮಿ ಚಟಗಳ ಬಗ್ಗೆ ಹೇಳುತ್ತಾರೆ. ಚಲುವರಾಯಸ್ವಾಮಿ ಎಷ್ಟು ಮನೆ ಹಾಳು ಮಾಡಿದ್ದಾರೆ ಎಂದು ಎಲ್ಲರಿಗೂ ಗೊತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಇದಕ್ಕೂ ಮುನ್ನ ಮಂಡ್ಯದಲ್ಲಿ ಮಾತನಾಡಿದ್ದ ಸಚಿವ ಚಲುವರಾಯಸ್ವಾಮಿ, ಕುಮಾರಸ್ವಾಮಿ ಅವರನ್ನು ಮೊದಲ ಬಾರಿಗೆ ಸಿಎಂ ಮಾಡಲು ನಾನು ಶ್ರಮಪಟ್ಟಿದ್ದೇನೆ. ಒಂದು ವೇಳೆ ನಾನು ಶ್ರಮಪಡದೇ ಅವರ ಸ್ವಂತ ಶ್ರಮದಿಂದ ಸಿಎಂ ಆಗಿದ್ದೇನೆ ಎನ್ನುವುದಾದರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ ಎಂದು ಕುಮಾರಸ್ವಾಮಿ ಅವರಿಗೆ ಸವಾಲು ಹಾಕಿದ್ದರು.