ತಮಿಳಿನಿಂದಲೇ ಕನ್ನಡ ಹುಟ್ಟಿದ್ದು ಎಂಬ ನಟ ಕಮಲ್ ಹಾಸನ್ ಹೇಳಿಕೆಗೆ ನಟಿ ಸುಧಾರಾಣಿ ಪ್ರತಿಕ್ರಿಯೆ ಕೊಟ್ಟಿದ್ದಾರೆ.
King Kohli: ಕಿಂಗ್ ಕೊಹ್ಲಿ ಆರ್ಭಟ: ಕ್ರಿಸ್ ಗೇಲ್ ವಿಶ್ವ ದಾಖಲೆ ಶೇಕ್, ಶೇಕ್!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ನಮ್ಮ ಕರ್ನಾಟಕ, ಕನ್ನಡ ಭಾಷೆ ಬಗ್ಗೆ ಯಾರೇ ತಪ್ಪಾಗಿ ಹೇಳಿದರೂ ಅದನ್ನು ಒಪ್ಪಿಕೊಳ್ಳಲು ಆಗುವುದಿಲ್ಲ. ಆ ಸಮಯದಲ್ಲಿ ಖಂಡಿತವಾಗಿ ನಾವು ಎಲ್ಲರೂ ಒಟ್ಟಿಗೆ ನಿಂತೇ ನಿಲ್ಲುತ್ತೇವೆ. ನಮ್ಮ ಕನ್ನಡ ಭಾಷೆಯ ಬಗ್ಗೆ ದಾಖಲೆ ಇದೆ. ಅದನ್ನು ತೋರಿಸಿ ಅಂತಹವರಿಗೆ ತಿಳಿಹೇಳಬೇಕು. ಆದರೆ ಅವತ್ತು ಅಲ್ಲಿ ಏನು ನಡೆಯಿತು ಎಂದು ನಿಜಕ್ಕೂ ನನಗೆ ಗೊತ್ತಿಲ್ಲ. ದಯವಿಟ್ಟು ಆ ಬಗ್ಗೆ ಕೇಳಬೇಡಿ, ನಾನು ಮಾತನಾಡುವುದಿಲ್ಲ ಎಂದರು.
ನಮ್ಮ ನಾಡು, ನುಡಿ ಬಗ್ಗೆ ಈ ರೀತಿ ಮಾತನಾಡಿದರೆ ಅದು ತಪ್ಪು. ಕಮಲ್ ಹಾಸನ್ ಅವರು ಕ್ಷಮೆ ಕೇಳಬಹುದು ನೋಡೋಣ ಎಂದು ಹೇಳಿದ್ದಾರೆ.