ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಾಯಕರ ಹಾಗೆ ನಾನು ಹೆಣಗಳ ಮೇಲೆ ರಾಜಕೀಯ ಮಾಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಕಿಡಿಕಾರಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಅಹಮದಾಬಾದ್ ವಿಮಾನ ಅಪಘಾತದಂತಹ ದುರಂತ ದೇಶದಲ್ಲಿ ಮಾತ್ರವಲ್ಲ ಪ್ರಪಂಚದಲ್ಲಿ ಎಲ್ಲಿಯೂ ನಡೆಯಬಾರದು. ಈ ದುರಂತದಲ್ಲಿ ಅನೇಕರು ಸುಟ್ಟುಹೋಗಿದ್ದಾರೆ.
ಆ ದುರಂತದ ಸ್ಥಳ ನೋಡಿದರೆ ಆಘಾತವಾಗುತ್ತದೆ. ಅಕಸ್ಮಾತ್ 500 ಮೀ. ಮುಂದಕ್ಕೆ ಹೋಗಿ ವಿಮಾನ ಅಪ್ಪಳಿಸಿದ್ದರೂ ಸಾವಿರಾರು ಮಂದಿಯ ಜೀವಹಾನಿಯಾಗುತ್ತಿತ್ತು. ಈ ದುರಂತದಿಂದ ವೈದ್ಯಕೀಯ ಹಾಸ್ಟೆಲ್ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ.
ನೀವು ಕೂಡ ಜಾಸ್ತಿ ಉಪ್ಪಿನಕಾಯಿ ತಿಂತೀರಾ!? ಹಾಗಿದ್ರೆ ಈ ಸಮಸ್ಯೆಗಳು ಗ್ಯಾರಂಟಿ!
ಕೆಲವು ವಿದ್ಯಾರ್ಥಿಗಳಿಗೆ ಮಾನಸಿಕ ಆಘಾತವಾಗಿದೆ. ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ನಾವು ಕೆಲವರನ್ನು ಭೇಟಿ ಮಾಡಿ ಮಾತನಾಡಿಸಿದೆವು. ಈ ಅಪಘಾತ ಕುರಿತು ಬ್ಲ್ಯಾಕ್ಬಾಕ್ಸ್ ತನಿಖೆ ವರದಿ ಬರಬೇಕಾಗಿದೆ. ಕಾಂಗ್ರೆಸ್ ಪಕ್ಷದ ವತಿಯಿಂದ ಅಲ್ಲಿ ಹೋಗಿ ಸಾಂತ್ವನ ಹೇಳಿದ್ದೇವೆ ಎಂದು ತಿಳಿಸಿದ್ದಾರೆ.
ಈ ಘಟನೆ ನಂತರ ವಿಮಾನಯಾನ ಸಚಿವರ ಕಾರ್ಯವೈಖರಿ ಬಗ್ಗೆ ಪ್ರಶ್ನೆ ಮೂಡುತ್ತಿವೆ ಎಂದು ಕೇಳಿದಾಗ, ಬಿಜೆಪಿ ಹಾಗೂ ಜೆಡಿಎಸ್ನವರಿಗೆ ಹೆಣದ ಮೇಲೆ ರಾಜಕೀಯ ಮಾಡುವುದೇ ಕೆಲಸ. ನಾವು ಹಳೇ ಪ್ರಕರಣ ಹಾಗೂ ಈ ಪ್ರಕರಣವನ್ನು ಮುಂದಿಟ್ಟುಕೊಂಡು ಟೀಕೆ ಮಾಡಬಹುದು.
ಆದರೆ ನಾವು ಅವರ ಮಟ್ಟಕ್ಕೆ ಇಳಿಯುವುದಿಲ್ಲ. ಈ ವಿಚಾರದಲ್ಲಿ ಅನೇಕ ತಾಂತ್ರಿಕ ಅಂಶಗಳಿವೆ. ನಾನು ಅವುಗಳ ತಜ್ಞನಲ್ಲ. ಈ ಎಲ್ಲಾ ವಿಚಾರವಾಗಿ ಚರ್ಚೆ ಆಗುತ್ತಿದೆ. ಆದರೆ ಈ ವಿಚಾರವನ್ನು ರಾಜಕೀಯಗೊಳಿಸುವ ವ್ಯಕ್ತಿ ನಾನಲ್ಲ. ಈ ಸಮಯದಲ್ಲಿ ಕೇಂದ್ರ ಸಚಿವರ ಬಗ್ಗೆ ಟೀಕೆ ಮಾಡುವುದಿಲ್ಲ. ಇದು ದೇಶದ ಗಂಭೀರ ವಿಚಾರ ಎಂದಿದ್ದಾರೆ.