ಬೆಂಗಳೂರು:- ಚಿನ್ನಸ್ವಾಮಿ ಘಟನೆಯನ್ನು ನಾನು ಕಣ್ಣಾರೆ ಕಂಡಿದ್ದೇನೆ ಎಂದು ಚಂದನ್ ಶೆಟ್ಟಿ ಹೇಳಿದ್ದಾರೆ.
ಆರ್ಸಿಬಿ ಗೆಲುವಿನ ಸಂಭ್ರಮಾಚರಣೆಯಲ್ಲಿ ಕಾಲ್ತುಳಿತ ಉಂಟಾಗಿ 11 ಮಂದಿ ಸಾವನ್ನಪ್ಪಿದ ಕುರಿತು ಮಾತನಾಡಿದ ಅವರು, ಬುಧವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಘಟನೆಯನ್ನು ನಾನು ಕಣ್ಣಾರೆ ನೋಡಿದೆ. ಗೇಟ್ ನಂಬರ್ 3ರಲ್ಲಿ ಹೋಗಲು ನನಗೆ ಪಾಸ್ ಸಿಕ್ಕಿತ್ತು. ಗೇಟ್ ನಂಬರ್ 3ಕ್ಕೆ ತಲುಪಲು ಆಗಲೇ ಇಲ್ಲ, ಅಷ್ಟು ಜನ ಸೇರಿದ್ದರು. ಗೇಟ್ ನಂಬರ್ 10ಕ್ಕೆ ಹೋದೆ, ಅಲ್ಲೂ ತುಂಬಾ ಜನರಿದ್ದರು. ಜನರ ಮಧ್ಯೆ ಸಿಲುಕಿ ನನಗೂ ಉಸಿರಾಡಲು ಕಷ್ಟ ಆಯಿತು ಎಂದರು.