ಬೆಂಗಳೂರು: ಜಾತಿ ಜನಗಣತಿ ವರದಿ ಜಾರಿಯಾದ್ರೆ ಸಿದ್ದರಾಮಯ್ಯ ಇತಿಹಾಸದಲ್ಲಿ ಒಬ್ಬ ಖಳನಾಯಕ ಆಗ್ತಾರೆ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಲೇವಡಿ ಮಾಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಜಾತಿ ಜನಗಣತಿ ವರದಿ ಕಾಗಕ್ಕ ಗೂಬಕ್ಕ ಕತೆ ಥರ ಇದೆ.
ಈ ವರದಿ ಸಿದ್ದರಾಮಯ್ಯಗೇ ಮರಣ ಶಾಸನ ಆಗಬಹುದು. ಅವರ ಪಕ್ಷದವರೇ ಅವರನ್ನು ರಾಜಕೀಯವಾಗಿ ಕಾಲೆಳೆಯಲು ಪಿತೂರಿ ಮಾಡ್ತಿದ್ದಾರೆ. ಈ ವರದಿ ಜಾರಿಯಾದರೆ ಸಿದ್ದರಾಮಯ್ಯ ರಾಜ್ಯ ರಾಜಕೀಯ ಇತಿಹಾಸದಲ್ಲಿ ಒಬ್ಬ ಖಳನಾಯಕ ಆಗ್ತಾರೆ ಎಂದು ಲೇವಡಿ ಮಾಡಿದ್ದಾರೆ.
ಸಿದ್ದರಾಮಯ್ಯ ಅವರಿಗೆ ಪೂರ್ಣ ಸತ್ಯ ಗೊತ್ತಿದೆ. ಆದ್ರೆ ಅವರು ಅವರ ಕುರ್ಚಿ ಉಳಿಸಿಕೊಳ್ಳಲು ವರದಿ ಜಾರಿಗೆ ಮುಂದಾಗಿದ್ದಾರೆ. ಮೊನ್ನೆ ಮೊನ್ನೆ ಅವರ ಹೈಕಮಾಂಡ್ ನಾಯಕರು ಅವರನ್ನು ಕರೆದು ಹೇಳಿದ್ದಾರೆ, ಸಿದ್ದರಾಮಯ್ಯ ಅವರ ಇವತ್ತಿನ ಪರಿಸ್ಥಿತಿ ನೋಡಿದ್ರೆ, ಈ ಮಟ್ಟಕ್ಕೂ ಅವರು ಬಂದಿದ್ದಾರಾ ಅನ್ನೋ ನೋವು ಕಾಡುತ್ತೆ ನನಗೆ ಎಂದು ಹೇಳಿದ್ದಾರೆ.