ಉತ್ತರ ಪ್ರದೇಶ: ಬ್ರಹ್ಮೋಸ್ ಕ್ಷಿಪಣಿಯ ಶಕ್ತಿ ಬಗ್ಗೆ ಸಂದೇಹವಿದ್ದರೆ ಪಾಕಿಸ್ತಾನವನ್ನೇ ಕೇಳಿ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಉತ್ತರ ಪ್ರದೇಶ ರಕ್ಷಣಾ ಕಾರಿಡಾರ್ನ ಲಕ್ನೋ ನೋಡ್ನಲ್ಲಿ ಬ್ರಹ್ಮೋಸ್ ಏರೋಸ್ಪೇಸ್ ಇಂಟಿಗ್ರೇಷನ್ ಮತ್ತು ಪರೀಕ್ಷಾ ಸೌಲಭ್ಯದ ಉದ್ಘಾಟನೆಯಲ್ಲಿ ಮಾತನಾಡಿದ ಸಿಎಂ,
ಆಪರೇಷನ್ ಸಿಂಧೂರ್ ನಮಗೆ ಬ್ರಹ್ಮೋಸ್ ಕ್ಷಿಪಣಿಗಳ ಶಕ್ತಿಯನ್ನು ಸ್ಪಷ್ಟವಾಗಿ ತೋರಿಸಿಕೊಟ್ಟಿದೆ ಮತ್ತು ನಿಮಗೆ ಯಾವುದೇ ಸಂದೇಹವಿದ್ದರೆ, ಹೋಗಿ ಪಾಕಿಸ್ತಾನದ ಜನರನ್ನು ಕೇಳಿ ಎಂದು ಹೇಳಿದ್ದಾರೆ.
Mother’s Day 2025: ತಾಯಂದಿರ ದಿನದ ಇತಿಹಾಸ ಮತ್ತು ಮಹತ್ವ ಏನು ಗೊತ್ತಾ ? ಇಲ್ಲಿದೆ ಮಾಹಿತಿ
ಉತ್ತರ ಪ್ರದೇಶದಲ್ಲಿ ಶೀಘ್ರದಲ್ಲೇ ಉತ್ಪಾದನೆ ಆರಂಭವಾಗಲಿರುವ ಬ್ರಹ್ಮೋಸ್ ಯೋಜನೆಗಾಗಿ ರಾಜ್ಯ ಸರ್ಕಾರ 200 ಎಕರೆ ಭೂಮಿಯನ್ನು ಮಂಜೂರು ಮಾಡಿದೆ ಎಂದು ಇದೇ ವೇಳೆ ಯೋಗಿ ಆದಿತ್ಯನಾಥ್ ಹೇಳಿದರು. ‘ಮುಂದೆ ನಡೆಯುವ ಯಾವುದೇ ಭಯೋತ್ಪಾದನಾ ಕೃತ್ಯವನ್ನು ಯುದ್ಧ ಕೃತ್ಯವೆಂದು ಪರಿಗಣಿಸಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.
ಭಯೋತ್ಪಾದನೆಯನ್ನು ಸಂಪೂರ್ಣವಾಗಿ ಹತ್ತಿಕ್ಕುವವರೆಗೆ ಭಯೋತ್ಪಾದನೆಯ ಸಮಸ್ಯೆಯನ್ನು ಪರಿಹರಿಸಲಾಗುವುದಿಲ್ಲ. ಭಯೋತ್ಪಾದನೆಯನ್ನು ಹತ್ತಿಕ್ಕಲು, ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವದಲ್ಲಿ ನಾವೆಲ್ಲರೂ ಒಂದೇ ಧ್ವನಿಯಲ್ಲಿ ಒಟ್ಟಾಗಿ ಹೋರಾಡಬೇಕು’ ಎಂದು ಅವರು ಹೇಳಿದರು.