ಧಾರವಾಡ : ರಾಷ್ಟ್ರೀಯ ಹೆದ್ದಾರಿಯಲ್ಲಿ ಅಕ್ರಮವಾಗಿ ಗೋವುಗಳ ಸಾಗಿಸುತ್ತಿದ್ದ ವಾಹನವನ್ನು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ ಅವರು ತಡೆದು , ಗೋವುಗಳ ರಕ್ಷಣೆ ಮಾಡಿ ಪೊಲೀಸರಿಗೆ ಒಪ್ಪಿಸಿದರು.
ಧಾರವಾಡ ಗರಗ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಕ್ರಮ ಗೋವು ಸಾಗಾಟ ಹೆಚ್ಚಿನ ಪ್ರಮಾಣದಲ್ಲಿ ನಡೆಯುತ್ತಿದೆ. ದಾಖಲೆಗಳನ್ನು ಪರಿಶೀಲಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಪೊಲೀಸರಿಗೆ ಆಗ್ರಹಿಸಿದರು.
ಸ್ಥಳೀಯರು ಹಾಗೂ ಶ್ರೀ ರಾಮ ಸೇನೆ ಕಾರ್ಯಕರ್ತರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ವಾಹನ ತಡೆದು, ಪರಿಶೀಲನೆ ನಡೆಸಿ, ಸರಿಯಾದ ದಾಖಲೆ ಇಲ್ಲದ ಕಾರಣ ಧಾರವಾಡ ಗರಗ ಪೊಲೀಸರಿಗೆ ಮಾಹಿತಿ ನೀಡಿ, ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಈ ಸಂದರ್ಭದಲ್ಲಿ ಮಂಜುನಾಥ ಕಾಟೀಕರ್ ಸೇರಿದಂತೆ ಶ್ರೀ ರಾಮ ಸೇನೆ ಕಾರ್ಯಕರ್ತರು ಇದ್ದರು. ಈ ಕುರಿತು ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.