ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಾಟ ; ವಿಜಯಪುರದಲ್ಲಿ 40 ಟನ್ ಅಕ್ಕಿ ಜಪ್ತಿ

ವಿಜಯಪುರ : ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಹಾರಾಷ್ಟ್ರಕ್ಕೆಸಾಗಾಟ ಮಾಡುತ್ತಿದ್ದ ಪ್ರಕರಣ ಬೆಳಕಿಗೆ ಬಂದಿದೆ. ವಿಜಯಪುರ ನಗರದ ಹೊರಭಾಗದ ಎನ್​ಎಚ್ 50ರಲ್ಲಿ ಆಹಾರ ಮತ್ತು ನಾಗರೀಕ ಇಲಾಖೆ ಆಧಿಕಾರಿಗಳು ದಾಳಿ ನಡೆಸಿ ಸುಮಾರು 40 ಟನ್ ಅನ್ನಭಾಗ್ಯ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ.   ಬಾಗಲಕೋಟೆ ಜಿಲ್ಲೆಯಿಂದ ವಿಜಯಪುರ ಮೂಲಕ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಅನ್ನಭಾಗ್ಯ ಅಕ್ಕಿಯನ್ನು ಸಾಗಾಟ ಮಾಡಲಾಗುತ್ತಿತ್ತು. 600ಕ್ಕೂ ಅಧಿಕ ಪ್ಲಾಸ್ಟಿಕ್ ಮೂಟೆಗಳಲ್ಲಿ ಸಂಗ್ರಹಿಸಿ, ಲೋಡ್ ಮಾಡಿ ತಮಿಳುನಾಡು ರಾಜ್ಯದ ನೋಂದಣಿಯ ಲಾರಿಯಲ್ಲಿ ಮಹಾರಾಷ್ಟ್ರಕ್ಕೆ ಸಾಗಾಟ ಮಾಡಲಾಗುತ್ತಿತ್ತು ಎನ್ನಲಾಗಿದೆ. … Continue reading ಅನ್ನಭಾಗ್ಯ ಅಕ್ಕಿ ಅಕ್ರಮವಾಗಿ ಸಾಗಾಟ ; ವಿಜಯಪುರದಲ್ಲಿ 40 ಟನ್ ಅಕ್ಕಿ ಜಪ್ತಿ