ನವದೆಹಲಿ: ಭಾರತ ಹಾಗೂ ಪಾಕಿಸ್ತಾನದ ಡಿಜಿಎಂಒ ಇಂದು ಮಾತುಕತೆ ನಡೆಸಲಿದ್ದು, ಉದ್ವಿಗ್ನತೆ ಶಮನವಾಗುವುದೇ ಎಂದು ಕಾದು ನೋಡಬೇಕಿದೆ. ಭಾರತ ಮತ್ತು ಪಾಕಿಸ್ತಾನದ ನಡುವೆ ಮೇ 7 ರಂದು ಉದ್ವಿಗ್ನತೆ ಪ್ರಾರಂಭವಾಗಿತ್ತು, ಪಹಲ್ಗಾಮ್ ದಾಳಿಗೆ ಸೇಡು ತೀರಿಸಿಕೊಳ್ಳಲು, ಭಾರತವು ಪಿಒಕೆ ಮತ್ತು ಪಾಕಿಸ್ತಾನದಲ್ಲಿನ ಭಯೋತ್ಪಾದಕ ನೆಲೆಗಳ ಮೇಲೆ ದಾಳಿ ಮಾಡಿ ನಾಶಪಡಿಸಿತು.
ನೌಕಾ ಕಾರ್ಯಾಚರಣೆಗಳ ಮಹಾನಿರ್ದೇಶಕ ವೈಸ್ ಅಡ್ಮಿರಲ್ ಎ.ಎನ್.ಪ್ರಮೋದ್ ಮತ್ತು ವಾಯು ಕಾರ್ಯಾಚರಣೆಗಳ ಮಹಾನಿರ್ದೇಶಕ ಏರ್ ಮಾರ್ಷಲ್ ಎ.ಕೆ.ಭಾರ್ತಿ ಅವರು ಸುದ್ದಿಗೋಷ್ಠಿಯಲ್ಲಿದ್ದರು.
ಆಪರೇಷನ್ ಸಿಂಧೂರ ಬಗ್ಗೆ ಸಮಗ್ರ ಮಾಹಿತಿಗಳನ್ನು ಮಾಧ್ಯಮಗಳ ಜತೆ ಹಂಚಿಕೊಳ್ಳುವ ಸಂದರ್ಭದಲ್ಲಿ ಅವರು ಈ ಮಾಹಿತಿ ನೀಡಿದ್ದಾರೆ. ಇಂದಿನ ಉನ್ನತ ಮಟ್ಟದ ಸಭೆಯಲ್ಲಿ ಉಭಯ ರಾಷ್ಟ್ರ ನಾಯಕರು ಪರಿಸ್ಥಿತಿತಿಗಳ ಕುರಿತು ಅವಲೋಕಿಸಲಿದ್ದಾರೆ ಎಂದು ಸಹ ಮೂಲಗಳು ತಿಳಿಸಿವೆ.
ಇದೇ ವೇಳೆ ಭಾರತದ ಕಾರ್ಯಾಚರಣೆಯಲ್ಲಿ ಯೂಸಫ್ ಅಝರ್, ಅಬ್ದುಲ್ ಮಲಿಕ್ ರವೂಫ್ ಮತ್ತು ಮುದಾಸಿರ್ ಅಹ್ಮದ್ ಸೇರಿದಂತೆ 100ಕ್ಕೂ ಹೆಚ್ಚು ಉಗ್ರರು ಹತರಾಗಿದ್ದಾರೆ. ಆರ್ಟಿಲರಿ ಮತ್ತು ಶೆಲ್ ಚಕಮಕಿಯಲ್ಲಿ ಪಾಕಿಸ್ತಾನ ಸೇನೆಯ 35-40 ಸೈನಿಕರು ಮೃತಪಟ್ಟಿದ್ದಾರೆ ಎಂದು ವಿವರಿಸಿದರು.
ಪಾಕಿಸ್ತಾನದ ಒಳಗೆ 11 ವಾಯುನೆಲೆಗಳು ನಾಶವಾಗಿವೆ ಮತ್ತು ಆ ದೇಶದ ಮಿಲಿಟರಿ ಸಾಮರ್ಥ್ಯಕ್ಕೆ ವ್ಯಾಪಕ ಹಾನಿಯಾಗಿದೆ. ಆದ್ರೆ ಶನಿವಾರ ಕದನ ವಿರಾಮ ಘೋಷಣೆಯಾದ ಬಳಿಕವೂ ಪಾಕಿಸ್ತಾನ ಹಲವು ಬಾರಿ ಇದನ್ನು ಉಲ್ಲಂಘಿಸಿದೆ. ಶನಿವಾರ ರಾತ್ರಿ ಜಮ್ಮು ಪ್ರದೇಶದಲ್ಲಿ ಡ್ರೋನ್ಗಳು ಪತ್ತೆಯಾಗಿದ್ದು, ದೊಡ್ಡ ಸ್ಫೋಟದ ಸದ್ದು ಕೇಳಿಬಂದಿದೆ ಎಂದು ತಿಳಿಸಿದರು.