ಬೆಂಗಳೂರು:- ಕರ್ನಾಟಕದಲ್ಲಿ ನಾಳೆಯಿಂದ ಮಳೆ ಹೆಚ್ಚಳ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ.
ಜೂ.10ರ ವರೆಗೆ ಕಾಸರಗೋಡು ಸೇರಿದಂತೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಇರಲಿದ್ದು, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ಅಲ್ಲಲ್ಲಿ ಅಲ್ಪ ಅವಧಿಯ ತುಂತುರು ಮಳೆಯ ಮುನ್ಸೂಚನೆ ಇದೆ. ಜೂ.11ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ ಆರಂಭವಾಗುವ ಲಕ್ಷಣಗಳಿವೆ ಎಂದು ತಿಳಿಸಿದೆ.
ಕೌಟುಂಬಿಕ ಕಲಹ: ಹೆಂಡ್ತಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಸೂಸೈಡ್!
ಕೊಡಗು ಹಾಗೂ ಶಿವಮೊಗ್ಗ ಜಿಲ್ಲೆಗಳ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದ್ದು, ಹಾಸನದಲ್ಲಿ ಒಂದೆರಡು ಕಡೆ ತುಂತುರು ಮಳೆಯ ಸಾಧ್ಯತೆಗಳಿವೆ. ಚಿಕ್ಕಮಗಳೂರು ಜಿಲ್ಲೆಯ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಜೂ.10ರ ವರೆಗೆ ಮಲೆನಾಡು ಭಾಗಗಳಲ್ಲಿ ಸಾಮಾನ್ಯ ಮಳೆಯ ಸಾಧ್ಯತೆಗಳಿದ್ದು, ಜೂ.11ರಿಂದ ಉತ್ತಮ ಮಳೆಯ ಮುನ್ಸೂಚನೆ ಇದೆ ಎಂದು ಹೇಳಿದೆ.
ಉತ್ತರ ಒಳನಾಡಿನ ಬೆಳಗಾವಿ, ರಾಯಚೂರು, ಯಾದಗಿರಿ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇರಲಿದೆ. ದಕ್ಷಿಣ ಒಳನಾಡಿನ ಮೈಸೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಉಳಿದ ಭಾಗಗಳಲ್ಲಿ ಅಲ್ಲಲ್ಲಿ ಮೋಡದ ವಾತಾವರಣ ಇದೆ ಹವಮಾನ ಇಲಾಖೆ ತಿಳಿಸಿದೆ.