ನವದೆಹಲಿ/ಇಸ್ಲಾಮಾಬಾದ್:– ಪಾಕ್ ನಿಂದ ಬರುವ ಎಲ್ಲಾ ಆಮದುಗಳಿಗೆ ಭಾರತ ನಿರ್ಬಂಧ ವಿಧಿಸಿದೆ. ಪಹಲ್ಗಾಮ್ ದಾಳಿ ಬೆನ್ನಲ್ಲೇ ಪಾಕಿಸ್ತಾನ ಹಾಗೂ ಭಾರತದಲ್ಲಿ ಉದ್ವಿಗ್ನತೆ ಸ್ಥಿತಿ ನಿರ್ಮಾಣ ಆಗಿದೆ. ಯಾವುದೇ ಸಮಯದಲ್ಲಿ ಯುದ್ಧ ಘೋಷಣೆ ಆಗುವ ಸಾಧ್ಯತೆ ಇದೆ. ಅಲ್ಲದೇ ಪಾಕ್ ಜೊತೆಗಿನ ಸಂಬಂಧದ ಕೊಂಡಿಯನ್ನು ಸಂಪೂರ್ಣವಾಗಿ ಭಾರತ ಕಳಚಿದೆ. ಈ ನಡುವೆಯೇ ಭಾರತ ದೇಶ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ.
ಕಾಮುಕ ಉದ್ಯಮಿ: ಅಪ್ರಾಪ್ತ ಬಾಲಕಿಯರೆ ಇವನ ಟಾರ್ಗೆಟ್, ಪೋಕ್ಸೊ ಕೇಸಲ್ಲಿ ಜೈಲು ಸೇರಿದ ಪಾಪಿ
ನೆರೆಯ ದೇಶ ಪಾಕಿಸ್ತಾನದಿಂದ ಬರುವ ಎಲ್ಲಾ ಆಮದುಗಳನ್ನು ಭಾರತ ನಿಷೇಧಿಸಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತದೃಷ್ಟಿಯಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ತಿಳಿಸಿದೆ. ಇದು ಪಾಕಿಸ್ತಾನದಿಂದ ಸಾಗಣೆಯಲ್ಲಿರುವ ಎಲ್ಲಾ ಉತ್ಪನ್ನಗಳಿಗೆ ಅನ್ವಯಿಸುತ್ತದೆ ಎಂದು ಸರ್ಕಾರ ಹೇಳಿದೆ. ಪಾಕಿಸ್ತಾನದಿಂದ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದನ್ನು ಭಾರತ ತಕ್ಷಣದಿಂದ ಜಾರಿಗೆ ಬರುವಂತೆ ನಿಷೇಧಿಸಿದೆ ಎಂದು ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯ ಇಂದು ತಿಳಿಸಿದೆ.
ಪಾಕಿಸ್ತಾನದಲ್ಲಿ ತಯಾರಾಗುವ ಅಥವಾ ರಫ್ತು ಮಾಡುವ ಎಲ್ಲಾ ಸರಕುಗಳ ನೇರ ಅಥವಾ ಪರೋಕ್ಷ ಆಮದು ಅಥವಾ ಸಾಗಣೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ನಿಷೇಧಿಸಲಾಗುವುದು” ಎಂದು ವಾಣಿಜ್ಯ ಸಚಿವಾಲಯದ ಮೇ 2ರ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ರಾಷ್ಟ್ರೀಯ ಭದ್ರತೆ ಮತ್ತು ಸಾರ್ವಜನಿಕ ನೀತಿಯ ಹಿತಾಸಕ್ತಿಯಲ್ಲಿ ಈ ನಿರ್ಬಂಧವನ್ನು ವಿಧಿಸಲಾಗಿದೆ ಎಂದು ವಿದೇಶಿ ವ್ಯಾಪಾರ ಮಹಾನಿರ್ದೇಶನಾಲಯ ಅಧಿಸೂಚನೆಯಲ್ಲಿ ತಿಳಿಸಿದೆ.
ಏಪ್ರಿಲ್ 22ರಂದು ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ನಡುವಿನ ಏಕೈಕ ವ್ಯಾಪಾರ ಮಾರ್ಗವಾದ ವಾಘಾ-ಅಟ್ಟಾರಿ ಗಡಿಯನ್ನು ಭಾರತ ಈಗಾಗಲೇ ಮುಚ್ಚಿದೆ. ಇದು ಎರಡು ನೆರೆಯ ರಾಷ್ಟ್ರಗಳ ನಡುವಿನ ಸಂಬಂಧಗಳಲ್ಲಿ ಮತ್ತಷ್ಟು ಕ್ಷೀಣಿಸಲು ಕಾರಣವಾಯಿತು