ಶ್ರೀನಗರ: ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ನಬೈಸರನ್ ಕಣಿವೆಯಲ್ಲಿ ಉಗ್ರರು ಮಂಗಳವಾರ (ಏ.22) ಅಟ್ಟಹಾಸ ಮೆರೆದಿದ್ದಾರೆ. ಭಯೋತ್ಪಾದಕರು ಭಾರತಕ್ಕೆ ದೊಡ್ಡ ಆಘಾತ ನೀಡಿದ್ದಾರೆ. ಇದರ ಬೆನ್ನಲ್ಲೇ ಇದೀಗ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಒಳನುಸುಳಲು ಮುಂದಾಗುತ್ತಿದ್ದ ಇಬ್ಬರು ಭಯೋತ್ಪಾದಕರನ್ನು ಹತ್ಯೆ ಮಾಡಿದೆ.
ಈ ಇಬ್ಬರು ಭಯೋತ್ಪಾದಕರು ಬಾರಾಮುಲ್ಲಾದ ಉರಿ ನಾಲಾದ ಸರ್ಜೀವನ್ ಪ್ರದೇಶದ ಮೂಲಕ ಒಳನುಸುಳಲು ಪ್ರಯತ್ನಿಸಿದರು ಎಂದು ಚಿನಾರ್ ಕಾರ್ಪ್ಸ್ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಅಕ್ರಮವಾಗಿ ಒಳನುಸುಳಲು ಪ್ರಯತ್ನಿಸುತ್ತಿದ್ದ ಭಯೋತ್ಪಾದಕರನ್ನು ತಡೆದಿದ್ದು,
Helmet Tips: ಹೆಲ್ಮೆಟ್ ಧರಿಸದಿದ್ದರೆ ದಂಡ: ಖರೀದಿಸುವಾಗ ಈ ಸಲಹೆಗಳು ಕಡ್ಡಾಯ!
ಈ ವೇಳೆ ಗುಂಡಿನ ಚಕಮಕಿ ನಡೆಯಿತು. ಸತತ 1 ಗಂಟೆಯ ಕಾರ್ಯಾಚರಣೆ ನಂತರ ಇಬ್ಬರು ಭಯೋತ್ಪಾದಕರನ್ನು ಸದೆಬಡಿಯಲಾಯಿತು. ಈ ವೇಳೆ ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳು, ಮದ್ದುಗುಂಡುಗಳು ಮತ್ತು ಆಯುಧಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಪೋಸ್ಟ್‌ನಲ್ಲಿ ತಿಳಿಸಿದೆ.