ಫ್ಲೋರಿಡಾ: ಅಡ್ಡಿ ಆತಂಕಗಳಿಂದಾಗಿ 6 ಬಾರಿ ಮುಂದೂಡಿಕೆಯಾಗಿದ್ದ ಭಾರತೀಯ ಶುಭಾಂಶು ಶುಕ್ಲಾ ಅವರು ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ತೆರಳಿದ್ದಾರೆ. ಇಸ್ರೋ ಗಗನಯಾತ್ರಿ ಆಗಿರುವ ಶುಕ್ಲಾ ಅವರೊಂದಿಗೆ ಅಮೆರಿಕ, ಹಂಗರಿ ಮತ್ತು ಪೋಲೆಂಡ್ನ ಗಗನಯಾತ್ರಿಗಳೂ ಅಂತರಿಕ್ಷಕ್ಕೆ ಹಾರಿದ್ದಾರೆ.
ಆಕ್ಸಿಯಮ್ ಮಿಷನ್ ನ ವಿಶೇಷತೆ ಎಂದರೆ ಗಗನಯಾತ್ರಿಗಳು 14 ದಿನಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ಉಳಿದು ಅಧ್ಯಯನಗಳನ್ನು ನಡೆಸಲಿದ್ದಾರೆ. ಶುಕ್ಲಾ ಅವರು 7 ಪ್ರಯೋಗಗಳನ್ನು ಅಲ್ಲಿ ನಡೆಸಲಿದ್ದು ತಮ್ಮೊಂದಿಗೆ ಕೆಲವು ಕಾಳುಗಳನ್ನು ಒಯ್ಯಲಿದ್ದಾರೆ.
ತಾಂತ್ರಿಕ ತೊಂದರೆಗಳ ಕಾರಣಕ್ಕೆ ಹಲವು ಬಾರಿ ಆಕ್ಸಿಯಮ್ 4 ಮಿಷನ್ ಉಡಾವಣೆ ಮುಂದೂಡಲಾಗಿತ್ತು. ಎಲ್ಲಾ ತಾಂತ್ರಿಕ ದೋಷಗಳನ್ನು ಸರಿಪಡಿಸಿದ ಬಳಿಕ ಕಾರ್ಯಾಚರಣೆಗೆ ಸಿದ್ಧಪಡಿಸಲಾಗಿದೆ. ಬುಧವಾರ ಯೋಜನೆಯನ್ನು ಕಾರ್ಯರೂಪಕ್ಕೆ ತರಲಾಗುವುದು ಎಂದು ನಾಸಾ ಮತ್ತು ಸ್ಪೇಸ್ಎಕ್ಸ್ ಮೂಲಗಳು ಖಚಿತಪಡಿಸಿದ್ದವು.
ಮಧ್ಯಾಹ್ನ ಭಾರತೀಯ ಕಾಲಮಾನ 12.01ಕ್ಕೆ ಆಕ್ಸಿಯಮ್-4 ಬಾಹ್ಯಾಕಾಶ ಯೋಜನೆಯ ಗಗನಯಾತ್ರಿಗಳನ್ನು ಹೊತ್ತ ಸ್ಪೇಸ್ಎಕ್ಸ್ ಫಾಲ್ಕನ್-9 ನೌಕೆ, ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ಐಎಸ್ಎಸ್)ನತ್ತ ಪ್ರಯಾಣ ಬೆಳೆಸಲಿದೆ ಎಂದು ನಾಸಾ ಮತ್ತು ಸ್ಪೇಸ್ಎಕ್ಸ್ ಅಧಿಕೃತ ಎಕ್ಸ್ ಅಕೌಂಟ್ನಲ್ಲಿ ಪೋಸ್ಟ್ ಮಾಡಿವೆ.