ಶಿವಮೊಗ್ಗ: ಶಿವಮೊಗ್ಗ ನಗರದ ಬಂಗಾರಪ್ಪ ಬಡಾವಣೆಯಲ್ಲಿ ದೇವರ ವಿಗ್ರಹಗಳಿಗೆ ಅವಮಾನ ಮಾಡಿದ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಯುವಕರನ್ನು ಪೊಲೀಸರು ಬಂಧಿಸಿದ್ದಾರೆ. ರೆಹಮತ್‌ವಲ್ಲಾ ಹಾಗೂ ಸದ್ದಾಂ ಎಂಬವರನ್ನು ಬಂಧಿಸಿ, ವಿಚಾರಣೆ ನಡೆಸಲಾಗುತ್ತಿದೆ.
ಬಂಗಾರಪ್ಪ ಬಡಾವಣೆಯ ಪಾರ್ಕ್‌ನಲ್ಲಿ ಪ್ರತಿಷ್ಠಾಪಿತ ಗಣೇಶ ಹಾಗೂ ನಾಗದೇವರ ವಿಗ್ರಹಗಳ ಪೈಕಿ, ಎರಡು ಮೂರ್ತಿಗಳಿಗೂ ಇಬ್ಬರು ಕಿಡಿಗೇಡಿಗಳು ಕಾಲಿನಿಂದ ಒದ್ದು ಅವಮಾನಿಸಿ, ನಂತರ ನಾಗದೇವರ ಮೂರ್ತಿಯನ್ನು ಚರಂಡಿಗೆ ಎಸೆದು ಪರಾರಿಯಾಗಿದ್ದರು. ಈ ಕೃತ್ಯ ಸ್ಥಳೀಯರ ಕಣ್ಣುಗೆ ಬಿದ್ದಿದ್ದು, ಕೂಡಲೇ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು.
ಕುಂಬಳಕಾಯಿ ತಿಂದ್ರೆ ಎಷ್ಟೆಲ್ಲಾ ಬೆನಿಫಿಟ್ ಗೊತ್ತಾ? ಕಣ್ಣು, ಚರ್ಮ, ಕೂದಲು ಎಲ್ಲದಕ್ಕೂ ಮದ್ದು!
ಘಟನೆ ನಡೆದ ತಕ್ಷಣವೇ ಶಾಂತಿಭದ್ರತೆ ಕಾಯ್ದುಕೊಳ್ಳಲು ಬಡಾವಣೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ವಿರುದ್ಧ ಕಾನೂನು ಪ್ರಕ್ರಿಯೆ ನಡೆಯುತ್ತಿದೆ. ಈ ಘಟನೆ ಕೆಲಕಾಲ ಬಡಾವಣೆಯಲ್ಲಿ ಗೊಂದಲದ ವಾತಾವರಣವನ್ನು ಉಂಟುಮಾಡಿದರೂ, ಪೊಲೀಸರು ಶಾಂತಿಯುತ ಪರಿಸ್ಥಿತಿ ನಿರ್ಮಾಣ ಮಾಡಿದ್ದಾರೆ.