ವಿಶಾಖಪಟ್ಟಣಂ:- ಇಡೀ ಜಗತ್ತಿನಾದ್ಯಂತ ಇಂದು ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಭಾರತದಲ್ಲಿ ಕೂಡ ಯೋಗ ದಿನಾಚರಣೆಯ ಸಂಭ್ರಮ ಮನೆ ಮಾಡಿದೆ. ಅದರಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆಂಧ್ರಪ್ರದೇಶದ ವಿಶಾಖಪಟ್ಟಣಂನಲ್ಲಿ ನಡೆಯಲಿರುವ ಭವ್ಯ ಯೋಗ ದಿನಾಚರಣೆ ಸಮಾರಂಭದಲ್ಲಿ ಭಾಗವಹಿಸಿದ್ದಾರೆ. ಈ ಕಾರ್ಯಕ್ರಮಕ್ಕಾಗಿ ಸಕಲ ಸಿದ್ಧತೆ ಪೂರ್ಣಗೊಂಡಿದೆ. ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಬಂತೆಂದರೆ ಇಡೀ ಜಗತ್ತೇ ಭಾರತದತ್ತ ತಿರುಗಿ ನೋಡುತ್ತದೆ. ಮಾನಸಿಕ ಮತ್ತು ದೈಹಿಕ ಆರೋಗ್ಯ ಕಾಪಾಡಿಕೊಳ್ಳುವ ಅತ್ಯಂತ ಸರಳ ಮತ್ತು ಪುರಾತನ ಭಾರತೀಯ ವಿದ್ಯೆಯಾದ ಯೋಗ, ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಮೂಲಕ ಜಗತ್ತಿನ ಮೂಲೆ ಮೂಲೆಯನ್ನು ತಲುಪಿದೆ
ಜೂನ್ 21 ರಂದೇ ಯೋಗ ದಿನಾಚರಣೆ ಯಾಕೆ? ಇದರ ಹಿಂದಿನ ಅಚ್ಚರಿ ಕಾರಣ ಏನು? ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್!
ವಿಶಾಖಪಟ್ಟಣಂ ನಲ್ಲಿ ಅಂತರಾಷ್ಟ್ರೀಯ ಯೋಗಾ ದಿನಾಚರಣೆಗೆ ವೇದಿಕೆ ಸಜ್ಜುಗಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಿದ್ದಾರೆ. ಆರ್ಕೆ ಬೀಚ್ನಿಂದ ಭೋಗಪುರಂವರೆಗೆ 26 ಕಿ.ಮೀ ಉದ್ದದ ಕಾರಿಡಾರ್ನಲ್ಲಿ ಯೋಗ ನಡೆಯುತ್ತಿದೆ. 3 ಲಕ್ಷಕ್ಕೂ ಹೆಚ್ಚು ಜನರು ಏಕಕಾಲದಲ್ಲಿ ಯೋಗ ಮಾಡುತ್ತಿದ್ದಾರೆ. ಸಿಎಂ ಚಂದ್ರಬಾಬು ನಾಯ್ಡು ಸೇರಿದಂತೆ ಹಲವು ಸಚಿವರು ಸಾಥ್ ನೀಡಿದ್ದಾರೆ