ಗೋವಾ : ಗೋವಾದ ಶಿರ್ಗಾಂವ್ನಲ್ಲಿನ ಲೈರೈ ದೇವಿ ದೇವಸ್ಥಾನದ ಜಾತ್ರ ಮಹೋತ್ಸವದ ವೇಳೆ ನಡೆದ ಕಾಲ್ತುಳಿತ ಪ್ರಕರಣದ ತನಿಖೆಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಹೇಳಿದ್ದಾರೆ.
ಶನಿವಾರ ನಸುಕಿನ ಜಾವದಲ್ಲಿ 3 ಗಂಟೆ ಸುಮಾರಿಗೆ ದೇವಾಲಯದಲ್ಲಿ ಜಾತ್ರೆ ನಡೆಯುತ್ತಿತ್ತು. ಈ ವೇಳೆ ಕಾಲ್ತುಳಿತ ಸಂಭವಿಸಿ ಆರು ಜನರು ಮೃತಪಟ್ಟು 30ಕ್ಕೂ ಅಧಿಕ ಜನರು ಗಾಯಗೊಂಡರು. ಕಾಲ್ತುಳಿತದ ಸ್ಥಳಕ್ಕೆ ಗೋವಾ ಸಿಎಂ ಪ್ರಮೋದ್ ಸಾವಂತ್ ಭೇಟಿ ನೀಡಿದ್ದು, ಇಂದು ಬೆಳಗಿನ ಜಾವ ಆರು ಜನರು ಮೃತಪಟ್ಟ ಕಾಲ್ತುಳಿತ ಪ್ರಕರಣ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ತಿಳಿಸಿದ್ದು, ತನಿಖಾ ವರದಿಯನ್ನು ಬಹಿರಂಗಪಡಿಸಲಾಗುವುದು ಎಂದು ಹೇಳಿದ್ದಾರೆ.
ಗೋವಾದ ಶಿರ್ಗಾಂವ್ ನಲ್ಲಿ ಜಾತ್ರೋತ್ಸವದ ವೇಳೆ ಕಾಲ್ತುಳಿತ ; ಏಳು ಜನರ ದುರ್ಮರಣ
ಸ್ಥಳದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ, ಘಟನೆಯ ಬಗ್ಗೆ ವಿವರವಾದ ತನಿಖೆ ನಡೆಸುವಂತೆ ನಾನು ಕೇಳಿದ್ದೇನೆ. ವರದಿಯನ್ನು ಸಾರ್ವಜನಿಕಗೊಳಿಸುತ್ತೇವೆ. ಇಂತಹ ಘಟನೆಗಳನ್ನು ತಡೆಗಟ್ಟಲು ರಾಜ್ಯದ ಎಲ್ಲಾ ದೇವಾಲಯ ಉತ್ಸವಗಳಿಗೆ ಭವಿಷ್ಯದಲ್ಲಿ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗುವುದು ಎಂದರು.