ಸತತ ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಆಟಗಾರರು ದೇವರ ಮೊರೆ ಹೋಗಿದ್ದಾರೆ.
ಕಾಂಗ್ರೆಸ್ ಗೆ ದಿಢೀರ್ ಅಂಬೇಡ್ಕರ್ ನೆನಪಾಗಲು ಇದೇ ಕಾರಣ: ವಿಜಯೇಂದ್ರ ವ್ಯಂಗ್ಯ!
ಸಿಎಸ್ಕೆ ತಂಡದ ನಿಯಮಿತ ನಾಯಕ ರುತುರಾಜ್ ಗಾಯಕ್ವಾಡ್ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಪಂದ್ಯದಲ್ಲಿ ಮೊಣಕೈ ಮುರಿತಕ್ಕೆ ಒಳಗಾಗಿದ್ದರು. ಹೀಗಾಗಿ ಅವರನ್ನು ಇಡೀ ಟೂರ್ನಿಯಿಂದ ಹೊರಗಿಡಲಾಗಿದೆ. ಆದಾಗ್ಯೂ ತಂಡದಲ್ಲಿಯೇ ಉಳಿದಿರುವ ರುತುರಾಜ್ ಇದೀಗ ತಂಡದ ಕೆಲವು ಸದಸ್ಯರು ಹಾಗೂ ಮಾಲೀಕರೊಂದಿಗೆ ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆಯಲ್ಲಿ ಭಾಗಿಯಾಗಿದ್ದಾರೆ.
ಇಂದು ಪಂದ್ಯವಿದ್ದ ಕಾರಣ ಅಭ್ಯಾಸ ನಡೆಸುವ ಸಲುವಾಗಿ ತಂಡದ ಎಲ್ಲಾ ಆಟಗಾರರು ದೇವಸ್ಥಾನಕ್ಕೆ ಭೇಟಿ ನೀಡಿಲ್ಲ. ಇದೇ ಕಾರಣಕ್ಕಾಗಿಯೇ ನಾಯಕ ಧೋನಿ ಕೂಡ ದೇವಸ್ಥಾನಕ್ಕೆ ಬಂದಿಲ್ಲ ಎಂದು ತೊರುತ್ತದೆ.
ಈ ಸೀಸನ್ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಸತತ ಸೋಲುಗಳಿಂದ ಕಂಗೆಟ್ಟಿದೆ. ಕಳೆದ ಪಂದ್ಯದಲ್ಲಿ ಐದು ಬಾರಿಯ ಚಾಂಪಿಯನ್ ತಂಡವು ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಎಂಟು ವಿಕೆಟ್ಗಳ ಹೀನಾಯ ಸೋಲನ್ನು ಅನುಭವಿಸಿತು