ಇಂದಿನ ಐಪಿಎಲ್ ಡೆಲ್ಲಿ ತಂಡಕ್ಕೆ ಆಘಾತ ಎದುರಾಗಿದೆ. ಇಂದಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಡೆಲ್ಲಿ ತಂಡಗಳು ಮುಖಾಮುಖಿಯಾಗಿವೆ. ಆದರೆ ಇಂತಹ ಮುಖ್ಯವಾದ ಪಂದ್ಯದಲ್ಲಿ ಡೆಲ್ಲಿ ತಂಡಕ್ಕೆ ನಾಯಕನ ಅನುಪಸ್ಥಿತಿ ಆಘಾತ ಎದುರಾಗಿದೆ.
ಕರ್ನಾಟಕದ ನೂತನ ಪೊಲೀಸ್ ಮಹಾ ನಿರ್ದೇಶಕರಾಗಿ ಡಾ. M A ಸಲೀo ನೇಮಕ: ರಾಜ್ಯ ಸರ್ಕಾರ ಆದೇಶ!
ತಂಡದ ನಾಯಕ ಅಕ್ಷರ್ ಪಟೇಲ್ (Axar Patel) ಈ ಪಂದ್ಯದಿಂದ ಹೊರಗುಳಿದ್ದಾರೆ. ಹೀಗಾಗಿ ಅವರ ಬದಲಿಗೆ ಫಾಫ್ ಡು ಪ್ಲೆಸಿಸ್ ತಂಡದ ನಾಯಕತ್ವವಹಿಸಿಕೊಂಡಿದ್ದಾರೆ. ಅಕ್ಷರ್ ಪಟೇಲ್ ಕಳೆದ ಎರಡು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದಾರೆ, ಅವರಿಗೆ ಜ್ವರವಿದೆ. ಅವರು ಶೀಘ್ರದಲ್ಲೇ ಫಿಟ್ ಆಗುತ್ತಾರೆ ಎಂದು ಆಶಿಸುತ್ತೇನೆ. ಈ ಸೀಸನ್ನಲ್ಲಿ ಅಕ್ಷರ್ ಪಟೇಲ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಹೀಗಾಗಿ ಇಂದಿನ ಪಂದ್ಯದಲ್ಲಿ ನಾವು ಅವರನ್ನು ಮಿಸ್ ಮಾಡಿಕೊಳ್ಳುತ್ತೇವೆ ಎಂದು ಫಾಫ್ ಟಾಸ್ ಸಮಯದಲ್ಲಿ ಹೇಳಿದರು.
ಡೆಲ್ಲಿ ತಂಡದ ಪಾಲಿಗೆ ಒಳ್ಳೆಯ ವಿಷಯವೆಂದರೆ ಡು ಪ್ಲೆಸಿಸ್ ನಾಯಕತ್ವದ ಉತ್ತಮ ಅನುಭವ ಹೊಂದಿದ್ದಾರೆ. ಈ ಹಿಂದೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿದ್ದ ಫಾಫ್ ಡು ಪ್ಲೆಸಿಸ್, ತಮ್ಮ ಅನುಭವದೊಂದಿಗೆ ದೆಹಲಿಗೆ ಹೊಸ ದಿಕ್ಕನ್ನು ನೀಡಬಲ್ಲರು. ಇತ್ತೀಚಿಗೆ ಗಾಯದಿಂದ ಚೇತರಿಸಿಕೊಂಡು ಫಿಟ್ ಆಗಿರುವ ಫಾಫ್ ನಾಯಕತ್ವದ ಜವಾಬ್ದಾರಿಯನ್ನು ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಈ ಪಂದ್ಯದಲ್ಲಿ ಡೆಲ್ಲಿ ತಂಡಕ್ಕೆ ಡು ಪ್ಲೆಸಿಸ್ ಅವರ ಆಕ್ರಮಣಕಾರಿ ಬ್ಯಾಟಿಂಗ್ ಮತ್ತು ಕಾರ್ಯತಂತ್ರದ ಚಿಂತನೆ ಮುಖ್ಯವಾಗಲಿದೆ.
ಮುಂಬೈ ಇಂಡಿಯನ್ಸ್ ವಿರುದ್ಧದ ಈ ಪಂದ್ಯ ಡೆಲ್ಲಿ ತಂಡಕ್ಕೆ ಮಾಡು ಇಲ್ಲವೇ ಮಡಿ ಎಂಬಂತ್ತಾಗಿದೆ. ಕಳೆದ ಪಂದ್ಯದಲ್ಲಿ ಮುಂಬೈ ತಂಡವು ಡೆಲ್ಲಿ ತಂಡವನ್ನು 12 ರನ್‌ಗಳಿಂದ ಸೋಲಿಸಿತ್ತು, ಆ ಪಂದ್ಯದಲ್ಲಿ ಮಧ್ಯಮ ಕ್ರಮಾಂಕದ ವೈಫಲ್ಯ ಮತ್ತು ಕಳಪೆ ಫೀಲ್ಡಿಂಗ್ ಸೋಲಿಗೆ ಕಾರಣವಾಗಿತ್ತು. ಡು ಪ್ಲೆಸಿಸ್ ನಾಯಕತ್ವದಲ್ಲಿ, ಡೆಲ್ಲಿ ಈ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಪ್ರಯತ್ನಿಸಲಿದೆ.