ಐಪಿಎಲ್ 2025 ರಲ್ಲಿ ಇಂದು 9 ನೇ ಪಂದ್ಯ ನಡೆಯುತ್ತಿದ್ದು, ಈ ಬಾರಿ ಮೊದಲ ಪಂದ್ಯದಲ್ಲಿ ಸೋತಿದ್ದ ಎರಡು ತಂಡಗಳ ನಡುವೆ ಘರ್ಷಣೆ ನಡೆಯುತ್ತಿದೆ. ಅಹಮದಾಬಾದ್ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಗುಜರಾತ್ ಟೈಟಾನ್ಸ್ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸುತ್ತಿದೆ. ಶುಭ್ಮನ್ ಗಿಲ್ ನಾಯಕತ್ವದ ಗುಜರಾತ್ ತಂಡ ತನ್ನ ಮೊದಲ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಸೋತಿತ್ತು. ಇತ್ತ, ಮುಂಬೈ ಇಂಡಿಯನ್ಸ್ ತನ್ನ ತವರು ನೆಲದಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ಸೋಲನ್ನು ಎದುರಿಸಬೇಕಾಯಿತು.
ಸರ್ಕಾರ ಯಾವುದನ್ನೂ ಉಚಿತವಾಗಿ ನೀಡಬಾರದು, ಉಚಿತ ಎನ್ನುವುದೇ ಅಪಾಯಕಾರಿ: ಆರ್.ವಿ.ದೇಶಪಾಂಡೆ
ಮೊದಲಿಗೆ ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದರು. ಅದರಂತೆ ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ತಂಡವು 20 ಓವರ್ಗಳಲ್ಲಿ 8 ವಿಕೆಟ್ ನಷ್ಟಕ್ಕೆ 196 ರನ್ ಗಳಿಸಿದೆ. ಮುಂಬೈ ಇಂಡಿಯನ್ಸ್ ಗೆಲ್ಲಲು 197 ರನ್ ಗಳಿಸಬೇಕಾಗಿದೆ.
ಮುಂಬೈ ತಂಡ
ರೋಹಿತ್ ಶರ್ಮಾ, ರಯಾನ್ ರಿಕಲ್ಟನ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ (ನಾಯಕ), ತಿಲಕ್ ವರ್ಮಾ, ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಾಹರ್, ಟ್ರೆಂಟ್ ಬೌಲ್ಟ್, ಮುಜೀಬ್ ಉರ್ ರೆಹಮಾನ್, ಸತ್ಯನಾರಾಯಣ್ ರಾಜು.
ಗುಜರಾತ್ ಟೈಟನ್ಸ್
ಶುಭಮನ್ ಗಿಲ್ (ನಾಯಕ), ಸಾಯಿ ಸುದರ್ಶನ್, ಜೋಸ್ ಬಟ್ಲರ್, ಶೆರ್ಫೇನ್ ರುದರ್ಫೋರ್ಡ್, ರಾಹುಲ್ ತೆವಾಟಿಯಾ, ಶಾರುಖ್ ಖಾನ್, ರಶೀದ್ ಖಾನ್, ಆರ್ ಸಾಯಿ ಕಿಶೋರ್, ಕಗಿಸೊ ರಬಾಡ, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ.