ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ನಡೆದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಭರ್ಜರಿಯಾಗಿ ಗೆದ್ದುಕೊಂಡಿದೆ.
ಈ ರಾಶಿಯವರು ಒಂದೇ ಕಡೆ ಪರಮನೆಂಟ್ ಕೆಲಸ ಮಾಡಲು ಸಾಧ್ಯವಾಗುತ್ತಿಲ್ಲ: ಮಂಗಳವಾರದ ರಾಶಿ ಭವಿಷ್ಯ 29 ಏಪ್ರಿಲ್ 2025
ರಾಜಸ್ಥಾನ ತಂಡಕ್ಕೆ ಪ್ಲೇಆಫ್ ಆಸೆ ಇನ್ನೂ ಜೀವಂತವಾಗಿದೆ. ಗುಜರಾತ್ ತಂಡವನ್ನು ರಾಜಸ್ಥಾನ 8 ವಿಕೆಟ್‌ಗಳಿಂದ ಸೋಲಿಸಿದೆ. ಈ ಅಮೋಘ ಗೆಲುವಿನ ಹೀರೋ 14 ವರ್ಷದ ವೈಭವ್ ಸೂರ್ಯವಂಶಿ ದಾಖಲೆಯ ಶತಕ ಸಿಡಿಸಿ ಸಂಭ್ರಮಿಸಿದರು
ಶುಭಮನ್ ಗಿಲ್ ನೇತೃತ್ವದ ಗುಜರಾತ್ ಟೈಟಾನ್ಸ್ ತಂಡ ಮೊದಲು ಬ್ಯಾಟಿಂಗ್ ಮಾಡಿ ನಿಗದಿತ 20 ಓವರ್‍ಗಳಲ್ಲಿ 4 ವಿಕೆಟ್ ಕಳೆದುಕೊಂಡು 209 ರನ್ ಗಳಿಸಿತು. ಈ ಬೃಹತ್ ಗುರಿ ಬೆನ್ನಟ್ಟಿದ ರಾಜಸ್ಥಾನ ರಾಯಲ್ಸ್ ಉತ್ತಮ ಆರಂಭದ ಬಲದಿಂದ ಕೇವಲ 15.5 ಓವರ್‍ಗಳಲ್ಲಿ 2 ವಿಕೆಟ್ ನಷ್ಟಕ್ಕೆ 212 ರನ್ ಗಳಿಸಿ ಗೆಲುವು ಸಾಧಿಸಿತು.
ಗುಜರಾತ್ ಟೈಟಾನ್ಸ್ ತಂಡ ನೀಡಿದ 210 ರನ್‌ಗಳ ಗೆಲುವಿನ ಗುರಿಯನ್ನು ಬೆನ್ನಟ್ಟಿದ ರಾಜಸ್ಥಾನ ತಂಡವು ಅದ್ಭುತ ಆರಂಭವನ್ನು ಪಡೆಯಿತು. ವೈಭವ್ ಸೂರ್ಯವಂಶಿ ಮತ್ತು ಯಶಸ್ವಿ ಜೈಸ್ವಾಲ್ ಹಸಿದ ಸಿಂಹಗಳಂತೆ ಗುಜರಾತ್ ಮೇಲೆ ದಾಳಿ ಮಾಡಿದರು. ವೈಭವ್ ಮೊದಲು ಕೇವಲ 17 ಎಸೆತಗಳಲ್ಲಿ ಅರ್ಧಶತಕ ಗಳಿಸಿದರು. ನಂತರ ಮುಂದಿನ 15 ಎಸೆತಗಳಲ್ಲಿ 50 ರನ್ ಗಳಿಸಿದರು. ಅವರು ಕೇವಲ 35 ಎಸೆತಗಳಲ್ಲಿ ಶತಕ ಗಳಿಸಿದರು. ಈ ಮೂಲಕ ಐಪಿಎಲ್‌ನಲ್ಲಿ ಎರಡನೇ ಅತಿ ವೇಗದ ಶತಕ ಸಿಡಿಸಿದ ಬ್ಯಾಟರ್ ಎನಿಸುಕೊಂಡರು. ಈ ಇನ್ನಿಂಗ್ಸ್‌ನಲ್ಲಿ ವೈಭವ್ ಬ್ಯಾಟ್‌ನಿಂದ 11 ಬೌಂಡರಿಗಳು ಮತ್ತು 7 ಸಿಕ್ಸರ್‌ಗಳು ಸಿಡಿದವು.
ಜೈಸ್ವಾಲ್ ಕೂಡ ಇನ್ನೊಂದು ತುದಿಯಿಂದ ಅಬ್ಬರದ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಅವರು 40 ಎಸೆತಗಳಲ್ಲಿ 70 ರನ್ ಗಳಿಸಿ ತಂಡದ ಗೆಲುವು ತಂದು ಕೊಟ್ಟರು. ಇದರೊಂದಿಗೆ ರಾಜಸ್ಥಾನ ತಂಡವು 8 ವಿಕೆಟ್‌ಗಳಿಂದ ಪಂದ್ಯವನ್ನು ಗೆದ್ದು ಪ್ಲೇಆಫ್‌ನಲ್ಲಿ ಸ್ಥಾನ ಪಡೆಯುವ ಕನಸನ್ನು ಜೀವಂತವಾಗಿರಿಸಿಕೊಂಡಿದೆ.