IPL 2025 ರಲ್ಲಿ ಗುಜರಾತ್ ಟೈಟಾನ್ಸ್ ಪರ ಕಣಕ್ಕಿಳಿಯುತ್ತಿರುವ ಕರ್ನಾಟಕ ವೇಗಿ ಪ್ರಸಿದ್ಧ್ ಕೃಷ್ಣ ಅತ್ಯದ್ಭುತ ಪ್ರದರ್ಶನ ಮುಂದುವರೆಸಿದ್ದಾರೆ.
ಇಂಡಿಗೋ ವಿಮಾನಕ್ಕೆ ಟಿಟಿ ವಾಹನ ಡಿಕ್ಕಿ ಕೇಸ್: ಕೆಂಪೇಗೌಡ ಏರ್ಪೋರ್ಟ್ ಮಂಡಳಿ ಕೊಟ್ಟ ಸ್ಪಷ್ಟನೆ ಇಲ್ಲಿದೆ!
7 ಪಂದ್ಯಗಳಲ್ಲಿ 27 ಓವರ್ಗಳನ್ನು ಎಸೆದಿರುವ ಪ್ರಸಿದ್ಧ್ ಕೃಷ್ಣ ಒಟ್ಟು 201 ರನ್ ನೀಡುವ ಮೂಲಕ 14 ವಿಕೆಟ್ಗಳನ್ನು ಕಬಳಿಸಿದ್ದಾರೆ. ಅದು ಕೂಡ ಪ್ರತಿ ಓವರ್ನಲ್ಲಿ ಕೇವಲ 7.44 ಎಕಾನಮಿಯಲ್ಲಿ ರನ್ ಬಿಟ್ಟು ಕೊಡುವ ಮೂಲಕ ಎಂಬುದು ವಿಶೇಷ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಪ್ರಸಿದ್ಧ್ ಕೃಷ್ಣ ಅಗ್ರಸ್ಥಾನ ಅಲಂಕರಿಸಿದ್ದಾರೆ.
ಇನ್ನು ಈ ಪಟ್ಟಿಯಲ್ಲಿ ದ್ವಿತೀಯ ಸ್ಥಾನದಲ್ಲಿರುವುದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಪಿನ್ನರ್ ಕುಲ್ದೀಪ್ ಯಾದವ್. 7 ಪಂದ್ಯಗಳಲ್ಲಿ 28 ಓವರ್ಗಳನ್ನು ಎಸೆದಿರುವ ಕುಲ್ದೀಪ್ ಯಾದವ್ 6.25ರ ಎಕಾನಮಿಯಲ್ಲಿ 175 ರನ್ ನೀಡುವ ಮೂಲಕ ಒಟ್ಟು 12 ವಿಕೆಟ್ಗಳನ್ನು ಕಬಳಿಸಿದ್ದಾರೆ
ಹಾಗೆಯೇ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸ್ಪಿನ್ನರ್ ನೂರ್ ಅಹ್ಮದ್ ಈ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. 7 ಪಂದ್ಯಗಳಲ್ಲಿ 24 ಓವರ್ಗಳನ್ನು ಎಸೆದಿರುವ ನೂರ್ ಅಹ್ಮದ್ 171 ರನ್ ನೀಡುವ ಮೂಲಕ 12 ವಿಕೆಟ್ ಕಬಳಿಸಿದ್ದಾರೆ. ಈ ಮೂಲಕ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ.
, ಇನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಜೋಶ್ ಹ್ಯಾಝಲ್ವುಡ್ ಕೂಡ ಪರ್ಪಲ್ ಕ್ಯಾಪ್ ರೇಸ್ನಲ್ಲಿ ಮುಂಚೂಣಿಯಲ್ಲಿದ್ದಾರೆ.