ಗುರುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಭರ್ಜರಿಯಾಗಿ ಗೆದ್ದು ಬೀಗಿದೆ. ಜೈಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಐಪಿಎಲ್ 2025 ರ 50 ನೇ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ (MI) ರಾಜಸ್ಥಾನ್ ರಾಯಲ್ಸ್ (RR) ತಂಡವನ್ನು 100 ರನ್ ಗಳ ಅಂತರದಿಂದ ಸೋಲಿಸಿತು
ಈ ರಾಶಿಯವರ ಮದುವೆ ವಿನಾಕಾರಣ ವಿಳಂಬ: ಶುಕ್ರವಾರದ ರಾಶಿ ಭವಿಷ್ಯ02 ಮೇ 2025!
ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ಕೇವಲ 2 ವಿಕೆಟ್ ನಷ್ಟಕ್ಕೆ 217 ರನ್ ಹೊಡೆಯಿತು. ಕಠಿಣ ಸವಾಲನ್ನು ಪಡೆದ ರಾಜಸ್ಥಾನ 16.1 ಓವರ್‌ಗಳಲ್ಲಿ 117 ರನ್ ಗಳಿಸಿ ಆಲೌಟ್ ಆಗಿದೆ. ಸತತ 6 ಜಯದೊಂದಿಗೆ ಉತ್ತಮ ರನ್ ರೇಟ್ ಹೊಂದಿರುವ ಕಾರಣ ಮುಂಬೈ ಇಂಡಿಯನ್ಸ್ ಅಂಕಪಟ್ಟಿಯಲ್ಲಿ 14 ಅಂಕದೊಂದಿಗೆ ಮೊದಲ ಸ್ಥಾನಕ್ಕೆ ಏರಿದರೆ ಅಷ್ಟೇ ಅಂಕ ಪಡೆದಿರುವ ಆರ್‌ಸಿಬಿ ಎರಡನೇ ಸ್ಥಾನಕ್ಕೆ ಜಾರಿದೆ.
ರಾಜಸ್ಥಾನ್ ತಂಡವು ಆರಂಭಿಕ ಹಂತದಲ್ಲೇ ಆಘಾತ ಅನುಭವಿಸಿತು. ಗುಜರಾತ್ ವಿರುದ್ಧ ಆಡಿದ ಕಳೆದ ಪಂದ್ಯದಲ್ಲಿ ಆರಂಭಿಕರಾದ ಯಶಸ್ವಿ ಜೆಸ್ವಾಲ್ ಹಾಗೂ ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್ ಪ್ರದರ್ಶಿಸಿದ್ದರು. ಅದೇ ಆಟದ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಇಂದು ಈ ಜೋಡಿ ನಿರಾಸೆ ಮೂಡಿಸಿತು. ಮೊದಲೇ ಓವರ್‌ನಲ್ಲೇ ದೀಪಕ್ ಚಹಾರ್ ಬೌಲಿಂಗ್ ದಾಳಿಗೆ ವೈಭವ್ ಸೂರ್ಯವಂಶಿ ಓಟಾಗಿ, ಪೆವಿಯನ್‌ನತ್ತ ಮುಖ ಮಾಡಿದರು. ಯಶಸ್ವಿ ಜೈಸ್ವಾಲ್ ಕೂಡಾ ಹೆಚ್ಚು ಹೊತ್ತು ಪೆವಿಲಿಯನ್‌ನಲ್ಲಿರದೇ ಬೋಲ್ಟ್‌ಗೆ ಕ್ಲೀನ್ ಬೋಲ್ಡ್ ಆದರು. ಅದಾಗಲೇ ರಾಜಸ್ಥಾನ ತಂಡ 2 ಓವರ್‌ಗೆ 18 ರನ್‌ನಷ್ಟಕ್ಕೆ 2 ವಿಕೆಟ್ ಕಳೆದುಕೊಂಡಿತ್ತು.