ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವೆ ನಡೆಯಬೇಕಿದ್ದ ಐಪಿಎಲ್‌ನ 58 ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಈ ಪಂದ್ಯದ ಟಾಸ್ ಕೂಡ ನಡೆಯಲು ಸಾಧ್ಯವಾಗಲಿಲ್ಲ. ಎರಡೂ ತಂಡಗಳಿಗೆ ತಲಾ ಒಂದು ಅಂಕ ನೀಡಲಾಗಿದೆ. ಇದರೊಂದಿಗೆ, ರಜತ್ ಪಾಟಿದಾರ್ ನೇತೃತ್ವದ ತಂಡವು 17 ಅಂಕಗಳೊಂದಿಗೆ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದರೆ, ಕೆಕೆಆರ್ 12 ಅಂಕಗಳೊಂದಿಗೆ ಆರನೇ ಸ್ಥಾನದಲ್ಲಿದೆ. ಹೀಗಾಗಿ ಕೆಕೆಆರ್ ತಂಡದ ಪ್ಲೇಆಫ್ ರೇಸ್‌ನಿಂದ ಹೊರಬಿದ್ದಿದೆ.
ಚಿನ್ನಸ್ವಾಮಿ ಕ್ರೀಡಾಂಗಣ ಸುತ್ತಮುತ್ತ ಮಳೆ ಆರ್ಭಟ: RCB Vs KKR ಪಂದ್ಯ ರದ್ದು!? ಫ್ಯಾನ್ಸ್ ಬೇಸರ!
ಕೆಕೆಆರ್‌ಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಆದರೆ ಮಳೆಯಿಂದ ಪಂದ್ಯವೇ ರದ್ದಾಗಿರುವುದರಿಂದ ಟೂರ್ನಿಯಿಂದ ಹೊರಬಿದ್ದಿದೆ. ಪಂದ್ಯ ಮಳೆಯಿಂದ ರದ್ದಾಗಿರುವುದರಿಂದ ಎರಡೂ ತಂಡಗಳಿಗೆ ತಲಾ ಒಂದು ಪಾಯಿಂಟ್ ಸಿಕ್ಕಿದೆ.
ಕೆಕೆಆರ್ ತಂಡ 12 ಪಂದ್ಯಗಳಲ್ಲಿ 5 ಗೆಲುವು, 6 ಸೋಲು ಮತ್ತು ಒಂದು ರದ್ದಾದ ಪಂದ್ಯದೊಂದಿಗೆ ಪ್ರಸ್ತುತ 12 ಅಂಕಗಳನ್ನು ಹೊಂದಿದೆ.
ಇನ್ನು ಆರ್ ಸಿಬಿ ಆಡಿರುವ 11 ಪಂದ್ಯಗಳಲ್ಲಿ 8 ರಲ್ಲಿ ಗೆಲುವು ಸಾಧಿಸಿದ್ದು, ಪಾಯಿಂಟ್ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದೆ. ಈಗ ಒಂದು ಪಂದ್ಯ ರದ್ದಾಗಿ 17 ಅಂಕ ಪಡೆಯುವ ಮೂಲಕ ಟೇಬಲ್ ಟಾಪರ್ ಆಗಿದ್ದು, ಪ್ಲೇ ಆಫ್ ಸ್ಥಾನ ಖಾತ್ರಿಯಾಗಿದೆ.