ಐಪಿಎಲ್ 2025ರ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಗುಜರಾತ್ ಟೈಟಾನ್ಸ್ ಭರ್ಜರಿ ಗೆಲುವು ಸಾಧಿಸಿದೆ. ಈ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದಿತ್ತು.
ಪಾಕಿಸ್ತಾನದ ಎದುರು ಯುದ್ಧಕ್ಕೆ ಹೋಗಲು ಸಿದ್ದ ; ಸಚಿವ ಜಮೀರ್ ಅಹಮ್ಮದ್ ಖಾನ್
ಟಾಸ್ ಗೆದ್ದ ಸನ್‌ರೈಸರ್ಸ್ ಹೈದರಾಬಾದ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ ಟೈಟಾನ್ಸ್ 20 ಓವರ್ ಗಳಲ್ಲಿ 6 ವಿಕೆಟ್ ಕಳೆದುಕೊಂಡು 224 ರನ್‌ಗಳ ಬೃಹತ್ ಮೊತ್ತ ಕಲೆಹಾಕಿತು. ಸಾಯಿ ಸುದರ್ಶನ್, ಶುಭಮನ್ ಗಿಲ್ ಮತ್ತು ಜೋಸ್ ಬಟ್ಲರ್ ಗುಜರಾತ್ ಟೈಟಾನ್ಸ್‌ಗೆ ಆಸರೆಯಾದರು.
ಸಾಯಿ ಸುದರ್ಶನ್ 23 ಎಸೆತಗಳಲ್ಲಿ 48 ರನ್ ಗಳಿಸಿದರೆ, ಶುಭಮನ್ ಗಿಲ್ 38 ಎಸೆತಗಳಲ್ಲಿ 10 ಬೌಂಡರಿ 2 ಸಿಕ್ಸರ್ ಸಹಿತ 76 ರನ್ ಗಳಿಸಿದರು. ಜೋಸ್ ಬಟ್ಲರ್ 37 ಎಸೆತಗಳಲ್ಲಿ 64 ರನ್ ಗಳಿಸಿ ಮಿಂಚಿದರು. ವಾಷಿಂಗ್ಟನ್ ಸುಂದರ್ 21 ರನ್ ಗಳಿಸಿದರು. ಸನ್‌ರೈಸರ್ಸ್ ಹೈದರಾಬಾದ್ ಪರ ಜಯದೇವ್ ಉನದ್ಕತ್ ಮಾತ್ರ 3 ವಿಕೆಟ್ ಪಡೆಯುವ ಮೂಲಕ ಯಶಸ್ವಿ ಬೌಲರ್ ಎನಿಸಿಕೊಂಡರು.
225 ರನ್‌ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಸನ್‌ರೈಸರ್ಸ್ ಹೈದರಾಬಾದ್ ಉತ್ತಮ ಆರಂಭವನ್ನೇ ಪಡೆಯಿತು. 4.3 ಓವರ್ ಗಳಲ್ಲಿ 49 ರನ್ ಗಳಿಸಿದ್ದಾಗ ಕನ್ನಡಿಗ ಪ್ರಸಿದ್ಧ್ ಕೃಷ್ಣ ಟ್ರಾವಿಸ್ ಹೆಡ್ ಅವರ ವಿಕೆಟ್ ಪಡೆಯುವ ಮೂಲಕ ಸನ್‌ರೈಸರ್ಸ್ ಹೈದರಾಬಾದ್‌ಗೆ ಶಾಕ್ ಕೊಟ್ಟರು. ಅದಾದ ಬಳಿಕ ಸನ್‌ರೈಸರ್ಸ್ ಹೈದರಾಬಾದ್ ಚೇತರಿಸಿಕೊಳ್ಳಲು ಆಗಲೇ ಇಲ್ಲ.
ಅಭಿಷೇಕ್ ಶರ್ಮಾ 41 ಎಸೆತಗಳಲ್ಲಿ 74 ರನ್ ಗಳಿಸುವ ಮೂಲಕ ಏಕಾಂಗಿ ಹೋರಾಟ ನೀಡಿದರು. ಇಶಾನ್ ಕಿಶನ್ 17 ಎಸೆತಗಳಲ್ಲಿ 13 ರನ್ ಗಳಿಸಿದರು. ಹೆನ್ರಿಚ್ ಕ್ಲಾಸೆನ್ 18 ಎಸೆಗಳಲ್ಲಿ 23 ರನ್ ಗಳಿಸಿ ಅಪಾಯಕಾರಿಯಾಗುತ್ತಿದ್ದಾಗ ಮತ್ತೆ ಬೌಲಿಂಗ್‌ಗೆ ಬಂದ ಪ್ರಸಿದ್ಧ್ ಕೃಷ್ಣ ಅವರನ್ನು ಔಟ್ ಮಾಡುವ ಮೂಲಕ ಗುಜರಾತ್ ಜೈಂಟ್ಸ್ ಗೆಲುವನ್ನು ಸುಲಭವಾಗಿಸಿದರು.