ಪಂಜಾಬ್ ವಿರುದ್ಧ ಗೆದ್ದು ಫೈನಲ್ ಪ್ರವೇಶಿಸಿದ ಆರ್ಸಿಬಿಗೆ ವಿಜಯ್ ಮಲ್ಯ ವಿಶ್ ಮಾಡಿದ್ದಾರೆ. ಈ ಸಂಬಂಧ X ಮಾಡಿರುವ ಅವರು, ಆರ್ಸಿಬಿ ಅತ್ಯುತ್ತಮ ಆಲ್-ರೌಂಡ್ ಪ್ರದರ್ಶನ ನೀಡಿದೆ. ಧೈರ್ಯದಿಂದ ಆಟವಾಡಿ, ಕಪ್ ಗೆಲ್ಲಿ ಎಂದು ಶುಭ ಹಾರೈಸಿದ್ದಾರೆ.
ಪಂಜಾಬ್ ಮಣಿಸಿ ಫೈನಲ್ ತಲುಪಿದ RCB: ಕ್ಯಾಪ್ಟನ್ ರಜತ್ ಗೆಲುವಿನ ಕ್ರೆಡಿಟ್ ಯಾರಿಗೆ ಕೊಟ್ರೂ!
ಐಪಿಎಲ್ ಟಿ20 ಟೂರ್ನಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ವಿರುದ್ಧ ಆರ್ಸಿಬಿ 8 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಆ ಮೂಲಕ ಐಪಿಎಲ್ ಇತಿಹಾಸದಲ್ಲಿ ನಾಲ್ಕನೇ ಬಾರಿಗೆ ಆರ್ಸಿಬಿ ಫೈನಲ್ಗೆ ಲಗ್ಗೆ ಇಟ್ಟಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಪಂಜಾಬ್ 14.1 ಓವರ್ಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡು ಕೇವಲ 101 ರನ್ ಗಳಿಸಿತು. ಆರ್ಸಿಬಿ 10 ಓವರ್ಗೆ ಗುರಿ ತಲುಪಿ ಗೆದ್ದು ಬೀಗಿತು.