ಬೆಂಗಳೂರು:: ಕರ್ನಾಟಕದಲ್ಲಿ 3 ದಿನ ಬಿರುಗಾಳಿ ಸಹಿತ ಭಾರೀ ಮಳೆ ಆಗಲಿದ್ದು, ಹಲವು ಜಿಲ್ಲೆಗಳಿಗೆ ಅಲರ್ಟ್ ಘೋಷಿಸಲಾಗಿದೆ.
ಕೇರಳದಲ್ಲಿ ವರುಣಾರ್ಭಟ ಜೋರಾಗಿದೆ. ಕಾಸರಗೋಡು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಗಂಟೆಗೆ 40 ಕಿ.ಮೀ. ವೇಗದಲ್ಲಿ ಬಲವಾದ ಗಾಳಿ ಬೀಸುವ ಸಾಧ್ಯತೆ ಇದೆ ಎಂದು ಕೇಂದ್ರ ಹವಾಮಾನ ಇಲಾಖೆ ಎಚ್ಚರಿಸಿದೆ.
ಕಣ್ಣೂರು ಮತ್ತು ಕಾಸರಗೋಡು ಜಿಲ್ಲೆಗಳಿಗೆ ಕೇಂದ್ರ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ನೀಡಿದೆ. ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಲಾಗಿದೆ. ಮಳೆಗೆ ಕೆಲವೆಡೆ ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಕಳದ ಕೆಲವು ದಿನಗಳಿಂದ ತಗ್ಗಿದ್ದ ಮುಂಗಾರು ಮಳೆ ಇದೀಗ ರಾಜ್ಯದಲ್ಲಿ ಮತ್ತೆ ಜೋರಾಗಿದೆ. ಮಲೆನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಮುಂದುವರೆದಿದ್ದು, ಈ ಭಾಗಗಳಲ್ಲಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅವಧಿ ಮುನ್ನವೇ ಡ್ಯಾಂಗಳ ತುಂಬಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಭಾಗದಲ್ಲಿ ಭಾರೀ ಮಳೆಯಾಗ್ತಿದೆ. ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಭಾರೀ ಮಳೆ ಮುಂದುವರೆದಿದೆ. ಮುಂಜಾಗೃತ ಕ್ರಮವಾಗಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲ ದಿನಗಳಿಂದ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದೆ. ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ