Close Menu
Ain Live News
    Facebook X (Twitter) Instagram YouTube
    Tuesday, July 1
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಸರಣಿ ಹೃದಯಸ್ತಂಭನಕ್ಕೆ ಕೋವಿಡ್ ಲಸಿಕೆ ಕಾರಣನಾ.? ಮೋದಿಯತ್ತ ಬೊಟ್ಟು ಮಾಡಿದ ಸಿದ್ದರಾಮಯ್ಯ…!

    By Author AINJuly 1, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳ ಸಂಖ್ಯೆ ಬೆಚ್ಚಿ ಬೀಳಿಸುತ್ತಿದೆ. ಯುವ ಮತ್ತು ಮಧ್ಯವಯಸ್ಕರಲ್ಲಿ ಹೃದಯಾಘಾತದಿಂದ ಸಾವಿನ ಆತಂಕಕಾರಿ ಏರಿಕೆಯನ್ನು ಮತ್ತಷ್ಟು ಎತ್ತಿ ತೋರಿಸಿದೆ. ಹೀಗೆ ದಿನೇ ದಿನೇ ಹೃದಯಾಘಾತಗಳ ಸಂಖ್ಯೆ ಹೆಚ್ಚಾಗುತ್ತಿರುವುದು ಮತ್ತಷ್ಟು ಕಳವಳವನ್ನುಂಟು ಮಾಡಿದೆ.

    ಇದೀಗ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೇ ನೀಡಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

    ಕಳೆದೊಂದು ತಿಂಗಳಿನಲ್ಲಿ ಹಾಸನ ಜಿಲ್ಲೆಯೊಂದರಲ್ಲೇ ಇಪ್ಪತ್ತಕ್ಕೂ ಅಧಿಕ ಮಂದಿ ಹೃದಯಾಘಾತಕ್ಕೆ ಒಳಗಾಗಿ ಸಾವಿಗೀಡಾದ ವಿಚಾರವನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದೆ. ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ…

    — CM of Karnataka (@CMofKarnataka) July 1, 2025

    ಈ ಸರಣಿ ಸಾವುಗಳಿಗೆ ನಿಖರ ಕಾರಣವನ್ನು ಪತ್ತೆಹಚ್ಚಿ, ಅದಕ್ಕೆ ಪರಿಹಾರ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ನಿರ್ದೇಶಕರಾದ ಡಾ. ರವೀಂದ್ರನಾಥ್ ಅವರ ನೇತೃತ್ವದಲ್ಲಿ ತಜ್ಞರ ಸಮಿತಿ ರಚಿಸಿ, 10 ದಿನಗಳ ಒಳಗಾಗಿ ಅಧ್ಯಯನ ವರದಿ ನೀಡುವಂತೆ ಸೂಚಿಸಲಾಗಿದೆ.

    ರಾಜ್ಯದಲ್ಲಿ ಎಳೆಯ ವಯಸ್ಸಿನವರ, ಯುವ ಜನರ ಹಠಾತ್ ನಿಧನಕ್ಕೆ ಕಾರಣಗಳೇನು? ಕೋವಿಡ್ ಲಸಿಕೆಯ ದುಷ್ಪರಿಣಾಮಗಳೇನಾದರೂ ಇರಬಹುದೇ? ಎಂದು ಕೂಲಂಕಷವಾಗಿ ಅಧ್ಯಯನ ನಡೆಸಲು ಇದೇ ಸಮಿತಿಗೆ ಕಳೆದ ಫೆಬ್ರವರಿ ತಿಂಗಳಲ್ಲೇ ಆದೇಶ ನೀಡಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ಹೃದ್ರೋಗಿಗಳನ್ನು ಪರಿಶೀಲನೆಗೊಳಪಡಿಸಿ, ವಿಶ್ಲೇಷಣೆ ಮಾಡುವ ಕಾರ್ಯ ಕೂಡ ಪ್ರಗತಿಯಲ್ಲಿದೆ.

    ಬದುಕಿ ಬಾಳಬೇಕಾದ ಚಿಕ್ಕಮಕ್ಕಳು, ಯುವಜನರು, ಅಮಾಯಕರ ಜೀವಗಳ ಬೆಲೆ, ಅವರ ಕುಟುಂಬಸ್ಥರ ಕಾಳಜಿ ನಮಗೂ ಇದೆ. ಇಂತಹ ವಿಚಾರಗಳನ್ನು ಕೂಡ ತಮ್ಮ ರಾಜಕೀಯ ಸಾಧನೆಗೆ ಬಳಕೆ ಮಾಡಿಕೊಳ್ಳುತ್ತಿರುವ ಬಿಜೆಪಿ ನಾಯಕರ ನಡೆಯನ್ನು ನಾನು ಖಂಡಿಸುತ್ತೇನೆ. ಆತುರಾತುರದಲ್ಲಿ ಕೊರೊನಾ ಲಸಿಕೆಗೆ ಅಧಿಕೃತ ಅನುಮೋದನೆ ಕೊಟ್ಟು,

    ಜನರಿಗೆ ಹಂಚಿದ್ದು ಕೂಡ ಈ ಸಾವುಗಳಿಗೆ ಕಾರಣವಿರಬಹುದು ಎಂಬುದನ್ನು ಅಲ್ಲಗಳೆಯಲಾಗದು, ಕಾರಣ ವಿಶ್ವದ ಅನೇಕ ಅಧ್ಯಯನಗಳು ಇತ್ತೀಚೆಗೆ ಹೆಚ್ಚಾಗಿರುವ ಹೃದಯ ಸ್ತಂಭನಕ್ಕೆ ಕೊವಿಡ್ ಲಸಿಕೆ ಕಾರಣ ಎಂಬುದನ್ನು ಹೇಳಿವೆ. ಈ ವಿಚಾರದಲ್ಲಿ ಬಿಜೆಪಿಯವರು ನಮ್ಮನ್ನು ಟೀಕಿಸುವ ಮುನ್ನ ಆತ್ಮಸಾಕ್ಷಿಯನ್ನೊಮ್ಮೆ ಕೇಳಿಕೊಳ್ಳಲಿ.

    ಹಾಸನ ಜಿಲ್ಲೆಯು ಸೇರಿದಂತೆ ರಾಜ್ಯದಲ್ಲಿ ಸಂಭವಿಸುತ್ತಿರುವ ಹಠಾತ್ ಸರಣಿ ಸಾವುಗಳಿಗೆ ನೈಜ ಕಾರಣ ಪತ್ತೆಮಾಡಿ, ತಡೆಯುವ ನಿಟ್ಟಿನಲ್ಲಿ ನಾವು ಸಂಪೂರ್ಣ ಬದ್ಧರಿದ್ದೇವೆ. ಈ ಉದ್ದೇಶದಿಂದಲೇ ಹೃದಯ ಜ್ಯೋತಿ ಮತ್ತು ಗೃಹ ಆರೋಗ್ಯದಂತಹ ಯೋಜನೆಗಳನ್ನು ಈಗಾಗಲೇ ಜಾರಿಗೆಕೊಟ್ಟು, ಸಾರ್ವಜನಿಕರ ಆರೋಗ್ಯದ ಮೇಲೆ ನಿಗಾ ವಹಿಸಲಾಗಿದೆ. ಡಾ. ರವೀಂದ್ರನಾಥ್ ಅವರ ನೇತೃತ್ವದ ತಜ್ಞರ ಸಮಿತಿ ವರದಿ ಆಧರಿಸಿ ಅಗತ್ಯ ಕ್ರಮಗಳನ್ನು ಕೂಡ ಕೈಗೊಳ್ಳಲಾಗುವುದು.

    ಜನರ ಆರೋಗ್ಯ ರಕ್ಷಣೆಗಾಗಿ ಒಂದು ಸರ್ಕಾರವಾಗಿ ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ನಾವು ಮಾಡುತ್ತಿದ್ದು, ಸಾರ್ವಜನಿಕರು ಎದೆನೋವು, ಉಸಿರಾಟದ ತೊಂದರೆ ಕಂಡುಬಂದರೆ ಅಲಕ್ಷ್ಯ ತೋರದೆ ತಕ್ಷಣವೇ ಸಮೀಪದ ಆರೋಗ್ಯ ಕೇಂದ್ರಗಳಿಗೆ ತೆರಳಿ ಪರೀಕ್ಷೆಗೆ ಒಳಗಾಗಬೇಕು ಎಂದು ಮನವಿ ಮಾಡುತ್ತೇನೆ ಎಂದು ಹೇಳಿದ್ದಾರೆ.

    Demo
    Share. Facebook Twitter LinkedIn Email WhatsApp

    Related Posts

    BRAKING : ವಾಲ್ಮೀಕಿ ನಿಗಮದ ಹಗರಣ ತನಿಖೆ ಸಿಬಿಐಗೆ ; ಹೈಕೋರ್ಟ್ ಆದೇಶ

    July 1, 2025

    ಕಾಲ್ತುಳಿತ ಪ್ರಕರಣ, ಸಿಎಟಿ ಆದೇಶ: ಮೇಲ್ಮನವಿ ಸಲ್ಲಿಸಲು ಅವಕಾಶವಿದೆ – ಸಿಎಂ ಸಿದ್ದರಾಮಯ್ಯ

    July 1, 2025

    ನಾಯಕತ್ವ ಬದಲಾವಣೆ ಬಗ್ಗೆ ಚರ್ಚೆ ಆಗುತ್ತಿಲ್ಲ, ನಮ್ಮ ಗಮನವೆಲ್ಲ 2028 ರ ಚುನಾವಣೆ ಮೇಲಿದೆ: ಶಿವಕುಮಾರ್

    July 1, 2025

    ಬೆಂಗಳೂರು ಕಾಲ್ತುಳಿತ, ಸರ್ಕಾರಕ್ಕೆ ಮುಖಭಂಗ: ಸಿಎಟಿ ಆದೇಶ ಪ್ರತಿ ಇನ್ನೂ ನೋಡಿಲ್ಲವೆಂದ ಜಿ ಪರಮೇಶ್ವರ್!

    July 1, 2025

    ಲಕ್ಕಿ ಲಾಟರಿ ಸಿಎಂ ಎಂದ BR ಪಾಟೀಲ್​ ಗುಮ್ಮಿದ ಸಿದ್ದರಾಮಯ್ಯ!

    July 1, 2025

    ನಿಜ ಸುದ್ದಿಗಾಗಿ ಹೋರಾಟ ನಡೆಸುವ ಸಂದರ್ಭ ಬಂದಿದೆ ಎಂದರೆ, ಸುಳ್ಳು ಸುದ್ದಿಗಳು ಹೆಚ್ಚಾಗಿವೆ ಅಂಥ ತಾನೇ ಅರ್ಥ: ಸಿಎಂ ಪ್ರಶ್ನೆ

    July 1, 2025

    1 ವರ್ಷದಿಂದ RR ನಗರ ಏರಿಯಾ ಮನೆಗಳೇ ಟಾರ್ಗೆಟ್..! ಪೊಲೀಸರ ನಿದ್ದೆಗೆಡಿಸಿದ್ದ ತಮಿಳುನಾಡಿನ ಕಳ್ಳ ಅರೆಸ್ಟ್

    July 1, 2025

    Gold Rate Today: ಆಭರಣ ಪ್ರಿಯರಿಗೆ ಶಾಕಿಂಗ್ ನ್ಯೂಸ್: ದೇಶಾದ್ಯಂತ ಇಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ!

    July 1, 2025

    Bengaluru: ಗನ್ ಹಿಡಿದು ನಿವೃತ್ತ ಪೊಲೀಸ್ ಅಧಿಕಾರಿಯ ರಂಪಾಟ..! ವಿಡಿಯೋ ವೈರಲ್

    July 1, 2025

    ವೇಶ್ಯಾವಾಟಿಕೆಗೆ ಒಪ್ಪದ ಪತ್ನಿಗೆ 6 ಬಾರಿ ತಲಾಖ್;ಸೈಕೋ ಪತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಹೆಂಡ್ತಿ

    July 1, 2025

    ಚಿನ್ನಸ್ವಾಮಿ ಕಾಲ್ತುಳಿತ ಕೇಸ್: IPS ಅಧಿಕಾರಿ ವಿಕಾಸ್ ಕುಮಾರ್ ಅಮಾನತು ರದ್ದು.!

    July 1, 2025

    National Doctors Day.. ಇಂದು ರಾಷ್ಟ್ರೀಯ ವೈದ್ಯರ ದಿನ: ಈ ದಿನದ ಇತಿಹಾಸ, ಮಹತ್ವದ ಮಾಹಿತಿ ಇಲ್ಲಿದೆ

    July 1, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.