ದಾವಣಗೆರೆ: ನಮ್ಮನ್ನು ಎದುರು ಹಾಕಿಕೊಂಡು ರಾಜ್ಯ ಭಾರ ಮಾಡಲು ಸಾಧ್ಯವೇ ಇಲ್ಲ ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ, ಹಿರಿಯ ಶಾಸಕ ಶಾಮನೂರು ಶಿವಶಂಕರಪ್ಪ ತಮ್ಮದೇ ಸರ್ಕರದ ವಿರುದ್ಧ ಕಿಡಿಕಾರಿದ್ದಾರೆ.
ಬಿಳಿ ಕೂದಲು ಬುಡದಿಂದಲೇ ಕಡು ಕಪ್ಪಾಗ್ಬೇಕಾ!? ಈ ಹಣ್ಣಿನ ಗಿಡದ ಎಲೆಯನ್ನು ನೀರಲ್ಲಿ ಕುದಿಸಿ ತಲೆಗೆ ಹಚ್ಚಿ ಸಾಕು!
ನಗರದಲ್ಲಿ ಮಾತನಾಡಿದ ಅವರು, ವೀರಶೈವ ಲಿಂಗಾಯತರನ್ನು ಹಾಗು ಒಕ್ಕಲಿಗರನ್ನು ಎದುರು ಹಾಕಿಕೊಂಡು ರಾಜ್ಯಭಾರ ಮಾಡಲು ಆಗುತ್ತಾ? ಲಿಂಗಾಯತರು ಹಾಗು ಒಕ್ಕಲಿಗರು ಇಬ್ಬರು ಸೇರಿ ಹೋರಾಟ ಮಾಡ್ತೇವೆ. ಇಬ್ಬರು ಸೇರಲಿದ್ದೇವೆ. ನಮ್ಮನ್ನು ಎದುರು ಹಾಕಿಕೊಂಡು ರಾಜ್ಯ ಭಾರ ಮಾಡಲು ಸಾಧ್ಯವೇ ಇಲ್ಲ. ಇದರ ಬಗ್ಗೆ ಸಭೆ ನಡೆದಿದ್ದು, ಮುಂದೇನು ಸಭೆ ಮಾಡ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
10 ವರ್ಷಗಳ ಹಿಂದೆ ಈ ಜನಗಣತಿ ನಡೆದಿದ್ದು, ಈ ಜನಗಣತಿ ವೈಜ್ಞಾನಿಕವಾಗಿ ಇಲ್ಲ, ಸರಿಯಾಗಿಲ್ಲ ಎಂಬುದು ರಾಜ್ಯದ ವಿವಿಧ ವರ್ಗದ ಜನ್ರ ಅಭಿಪ್ರಾಯ ಆಗಿದೆ. ಸರ್ಕಾರ ಇದೇ 17 ರಂದು ಸಚಿವ ಸಂಪುಟದಲ್ಲಿ ಚರ್ಚೆ ಮಾಡುತ್ತೇವೆ ಎಂದಿದೆ. ಅವರು ಗಂಭೀರವಾಗಿ ಚರ್ಚೆ ಮಾಡುತ್ತಾರೆ ಎಂದು ನಾವು ನಂಬಿದ್ದೇವೆ. ಮತ್ತೆ ಹೊಸದಾಗಿ ಶಾಸ್ತ್ರೀಯವಾಗಿ ಜನಗಣತಿ ಮಾಡುವ ಅವಶ್ಯಕತೆ ಇದೆ ಎಂದರು.