ಬೆಂಗಳೂರು: ‘ನೀವು ಹಿಂದೂಗಳೇ’ ಎಂದು ಪ್ರಶ್ನಿಸಿ ದಾಳಿ ಮಾಡಿರುವುದು ನಿಜಕ್ಕೂ ಅತ್ಯಂತ ಆತಂಕಕಾರಿ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಕಾಶ್ಮೀರ ಕಣಿವೆಯಲ್ಲಿ ನಡೆದ ಭಯೋತ್ಪಾದಕರ ದಾಳಿಯನ್ನು ಖಂಡಿಸುತ್ತೇನೆ. ಪ್ರಾಣ ಕಳೆದುಕೊಂಡಿರುವ ಆತ್ಮಕ್ಕೆ ಶಾಂತಿ ಕೋರುತ್ತೇನೆ. ಕುಟುಂಬ ವರ್ಗದವರಿಗೆ ನೋವನ್ನು ಭರಿಸುವ ಶಕ್ತಿ ನೀಡಲಿ ಅಂತ ಭಗವಂತನಲ್ಲಿ ಪ್ರಾರ್ಥಿಸುವೆ ಎಂದು ತಿಳಿಸಿದರು.
Helmet Tips: ಹೆಲ್ಮೆಟ್ ಧರಿಸದಿದ್ದರೆ ದಂಡ: ಖರೀದಿಸುವಾಗ ಈ ಸಲಹೆಗಳು ಕಡ್ಡಾಯ!
ನಮ್ಮಲ್ಲಿ ಬಹಳ ಪರಿಣಾಮಕಾರಿಯಾದ, ಶಕ್ತಿಯುತವಾದ ಮಿಲಿಟರಿ ಇಂಟೆಲಿಜೆನ್ಸ್ ಇದೆ. ಅನೇಕ ಸಂದರ್ಭಗಳಲ್ಲಿ ಮಿಲಿಟರಿ ಇಂಟಲಿಜೆನ್ಸ್ ಒಳ್ಳೆಯ ಕೆಲಸ ಮಾಡಿದೆ. ಯಾಕೆ ಇಂಟಲಿಜೆನ್ಸ್ ಫೆಲ್ಯೂರ್ ಆಯ್ತು?. ಟೆರರಿಸ್ಟ್‌ಗಳು ಎಲ್ಲಿಂದ, ಹೇಗೆ ಬಂದ್ರು ಎಂಬುದು ಅತಿದೊಡ್ಡ ಪ್ರಶ್ನೆ ಎಂದರು.
ಪುಲ್ವಾಮಾ ದಾಳಿ ನಂತರ ಇಲ್ಲಿಯವರೆಗೆ ಇಂತಹ ದುರ್ಘಟನೆಗಳು ನಡೆದಿರಲಿಲ್ಲ. ಹಿಂದೂಗಳನ್ನು ಗುರಿ ಮಾಡಿದ್ದಾರೆ. ದಾಳಿ ವೇಳೆ “ನೀನು ಹಿಂದೂ ಅದಕ್ಕಾಗಿ ಕೊಲ್ಲುತ್ತಿದ್ದೇವೆ” ಎಂದು ಭಯೋತ್ಪಾದಕರು ಹೇಳಿಕೊಂಡಿರುವುದು ನಿಜಕ್ಕೂ ಆತಂಕಕಾರಿ ವಿಚಾರ.
ಇದು ಹೊಸದಲ್ಲ ಅನ್ನಿಸುತ್ತದೆ. ದಾಳಿ ಮಾಡುವಾಗ ಅನೇಕ ಸಂದರ್ಭದಲ್ಲಿ ಆ ಮಾತುಗಳನ್ನು ಹೇಳಿದ್ದಾರೆ. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು. ಸೂಕ್ತವಾದ ಕ್ರಮವನ್ನು ಮುಲಾಜಿಲ್ಲದೆ ತೆಗೆದುಕೊಳ್ಳಬೇಕು ಎಂದು ಅವರು ಒತ್ತಾಯಿಸಿದರು.