ಬಳ್ಳಾರಿ: ಮಾಜಿ ಸಚಿವ, ಗಾಲಿ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಸಿಬಿಐ ಕೋರ್ಟ್ ನೀಡಿರುವ ಆದೇಶಕ್ಕೆ ತಡೆಯಾಜ್ಞೆ ನೀಡಿರುವ ಹೈಕೋರ್ಟ್, ಹಲವು ಷರತ್ತುಗಳನ್ನ ವಿಧಿಸಿ ಜಾಮೀನು ನೀಡಿದೆ.10 ಲಕ್ಷ ರೂಪಾಯಿ ಮೌಲ್ಯದ 2 ಶ್ಯೂರಿಟಿ ನೀಡಲು ಸೂಚಿಸಿದೆ. ಜೊತೆಗೆ ಭಾರತ ಬಿಟ್ಟು ಹೋಗಲು ಜನಾರ್ದನ ರೆಡ್ಡಿಗೆ ಅನುಮತಿ ಇಲ್ಲ. ಪಾಸ್ಪೋರ್ಟ್ ವಶಕ್ಕೆ ಪಡೆಯಲು ಕೋರ್ಟ್ ಸೂಚನೆ ನೀಡಿದೆ.
ಜಸ್ಟ್ ಈ ಎಲೆ ಜಗಿದು ರಸ ಸೇವಿಸಿದ್ರೆ ಸಾಕು ಕೊಲೆಸ್ಟ್ರಾಲ್ ಕರಗಿ ಹೋಗುತ್ತೆ!
ಇನ್ನೂ ರೆಡ್ಡಿ ಬೆಂಬಲಿಗರು ಜಾಮೀನು ಮಂಜೂರು ಮಾಡಿದ ಹಿನ್ನೆಲೆ ಬೆಂಬಲಿಗರು ಗಂಗಾವತಿ ನಗರದಲ್ಲಿ ಸಂಭ್ರಮಾಚರಣೆ ಮಾಡಿದ್ದಾರೆ. ಪಟಾಕಿ ಸಿಡಿಸಿ, ಸಿಹಿ ಹಂಚಿ, ಬಣ್ಣ ಎರಚುವ ಮೂಲಕ ಸಂಭ್ರಮಿಸಿದ್ದಾರೆ. ಎತ್ತುಗಳನ್ನು ಹಿಡಿದುಕೊಂಡು ಬಣ್ಣ ಎರಚುವುದಲ್ಲದೇ ಜನಾರ್ದನ ರೆಡ್ಡಿ ಫೋಟೋ ಹಿಡಿದು ಘೋಷಣೆ ಕೂಗಿದ್ದಾರೆ.
ಏನಿದು ಪ್ರಕರಣ?
ಆಂಧ್ರದಲ್ಲಿ ವೈ.ಎಸ್ ರಾಜಶೇಖರರೆಡ್ಡಿ ಹಾಗೂ ಕರ್ನಾಟಕದಲ್ಲಿ ಬಿ.ಎಸ್ ಯಡಿಯೂರಪ್ಪ ಸಿಎಂ ಆಗಿದ್ದಾಗ ಓಬಳಾಪುರಂ ಅಕ್ರಮ ಗಣಿಕಾರಿಕೆ ಪ್ರಕರಣ ಬೆಳಕಿಗೆ ಬಂದಿತ್ತು. ಆಂಧ್ರ–ಕರ್ನಾಟಕದ ಗಡಿಗೆ ಹೊಂದಿಕೊಂಡ ಓಬಳಾಪುರಂ ಬೆಟ್ಟದಲ್ಲಿ ಅದಿರಿನ ಅಕ್ರಮ ಗಣಿಗಾರಿಕೆ ನಡೆದಿದೆ ಎಂದು ಆರೋಪಿಸಲಾಗಿತ್ತು. ಗಣಿಗಾರಿಕೆ ಮಂಜೂರಾತಿ ವೇಳೆ ಇಲಾಖೆಗಳಿಂದ ಅಕ್ರಮವಾಗಿದೆ. ಅರಣ್ಯ ಇಲಾಖೆ, ಗಣಿ ಇಲಾಖೆಯಿಂದ ಅಕ್ರಮ ಆಗಿದೆ ಎಂದು ಆರೋಪಿಸಲಾಗಿತ್ತು.
ಓಬಳಾಪುರ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ 884 ಕೋಟಿ ಅಕ್ರಮ ಎಸಗಿರೋದು ಸಾಬೀತಾಗಿದೆ. ಒಟ್ಟು 29 ಲಕ್ಷ ಟನ್ ಅದಿರು ಲೂಟಿ ಆಗಿತ್ತು. ಪ್ರಕರಣದ ವಿಚಾರಣೆ ನಡೆಸಿದ್ದ ಸಿಬಿಐನ ವಿಶೇಷ ಕೋರ್ಟ್, ಶ್ರೀನಿವಾಸರೆಡ್ಡಿ, ಜನಾರ್ದನರೆಡ್ಡಿ, ಅಲಿಖಾನ್, ಸಬಿತಾ ಇಂದ್ರಾರೆಡ್ಡಿ, ಕೃಪಾನಂದ ದೋಷಿಗಳು ಎಂದು ಹೇಳಿತ್ತು. ಶಿಕ್ಷೆಯ ಪ್ರಮಾಣವಾಗಿ 5 ಅಪರಾಧಿಗಳಿಗೆ ತಲಾ 7 ವರ್ಷ ಜೈಲು ಶಿಕ್ಷೆ ಪ್ರಕಟ ಮಾಡಿತ್ತು.