ಬೆಂಗಳೂರು: ಸಿಇಟಿ ಹಾಗೂ ನೀಟ್ ಪರೀಕ್ಷೆ ವೇಳೆ ನಡೆದ ಜನಿವಾರ ತೆಗೆಸಿದ ವಿವಾದ ಇದೀಗ ಹೈಕೋರ್ಟ್ ಮೆಟ್ಟಿಲೇರಿದೆ.
ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬಳಿಕ ನಿನ್ನೆ ಕಲಬುರಗಿಯಲ್ಲಿ ನಡೆದ ನೀಟ್ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಪ್ರಕರಣ ಬ್ರಾಹ್ಮಣ ಸಮಾಜದ ಭಾರಿ ಆಕ್ರೋಶಕ್ಕೆ ಕಾರಣವಾಗಿತ್ತು. ರಾಜ್ಯ ಸರ್ಕಾರ ಕೂಡ ಜನಿವಾರ ತೆಗೆಸಿದ ಘಟನೆಯನ್ನು ಖಂಡಿಸಿದ್ದು, ಜನಿವಾರ ತೆಗೆಸಿದ ಪರೀಕ್ಷಾ ಕೇಂದ್ರದ ಸಿಬ್ಬಂದಿಯನ್ನು ಬಂಧಿಸಲಾಗಿದೆ.
ಜನಿವಾರ ತೆಗೆಸಿದ ಪ್ರಕರಣ: ಇಬ್ಬರ ಬಂಧನ – ಪೊಲೀಸ್ ಕಮಿಷನರ್ ಎಸ್.ಡಿ.ಶರಣಪ್ಪ ಹೇಳಿದ್ದಿಷ್ಟು.!
ಈ ನಡುವೆ, ನೀಟ್ ಹಾಗೂ ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದನ್ನು ಪ್ರಶ್ನಿಸಿ ಬ್ರಾಹ್ಮಣ ಸಂಘಟನೆ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದೆ. ಇನ್ಮುಂದೆ ನಡೆಯುವ ಯಾವುದೇ ಪ್ರಕರಣಗಳಲ್ಲಿ ಪರೀಕ್ಷೆಗಳಲ್ಲಿ ಜನಿವಾರ ತೆಗೆಸುವುದಂತೆ ಕಟ್ಟುನಿಟ್ಟಿನ ಸೂಚನೆ ನೀಡುವಂತೆ ಅರ್ಜಿಯಲ್ಲಿ ಮನವಿ ಮಾಡಲಾಗಿದೆ.