ಹುಬ್ಬಳ್ಳಿ:- ಜನಿವಾರ ತೆಗೆಸಿರುವುದು ಜನರ ನಂಬಿಕೆ ಮೇಲೆ ಪ್ರಹಾರ ಮಾಡುವಂತಿದೆ ಎಂದು ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.
ಆಸ್ತಿಗಳಿಗೆ ಎ-ಖಾತಾ, ಬಿ-ಖಾತಾ ನೀಡಲು ವಿಳಂಬ: ಕೆ.ಅರ್.ಎಸ್ ಪಕ್ಷದಿಂದ ಪ್ರತಿಭಟನೆ!
ಈ ಸಂಬಂಧ ನಗರದಲ್ಲಿ ಮಾತನಾಡಿದ ಅವರು, ಸಿಇಟಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಜನಿವಾರ ತೆಗೆಸಿರುವುದು ಜನರ ನಂಬಿಕೆ ಮೇಲೆ ಪ್ರಹಾರ ನಡೆಸಿದಂತೆ ಆಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಸರ್ಕಾರ ಹೋಂಗಾರ್ಡ್ನನ್ನು ಅಮಾನತ್ತು ಮಾಡಿ ಕೈ ತೊಳೆದುಕೊಂಡಿದ್ದು, ಇದು ಸರಿಯಲ್ಲ. ಕೇವಲ ಬ್ರಾಹ್ಮಣರಷ್ಟೇ ಜನಿವಾರ ಹಾಕುವುದಿಲ್ಲ. ಇದೊಂದು ಧಾರ್ಮಿಕ ನಂಬಿಕೆಯಾಗಿದ್ದು, ಇದರ ಮೇಲೆ ಪ್ರಹಾರ ನಡೆಸಿದೆ. ಇದನ್ನ ಗಂಭೀರವಾಗಿ ಪರಿಗಣಿಸಿ ಸರ್ಕಾರ ಇದಕ್ಕೊಂದು ಸ್ಪಷ್ಟ ಮಾರ್ಗಸೂಚಿ ಹೊರಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯದಲ್ಲಿ ಶುರುವಾದ ಜಾತಿಗಣತಿ ವಿವಾದ, ಆಡಳಿತ ವೈಫಲ್ಯ ಮರೆಮಾಚಲು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಏನಾದರೊಂದು ವಿಷಯಾಂತರ ಮಾಡುತ್ತಲೇ ಇರುತ್ತದೆ ಎಂದು ಟೀಕಿಸಿದರು.