ಬೆಂಗಳೂರು: ಸಿಇಟಿ ಪರೀಕ್ಷೆ ಬರೆಯಲು ಬಂದ ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರ ತೆಗೆಸಿ ಕೇಂದ್ರದೊಳಗೆ ಪ್ರವೇಶಕ್ಕೆ ಅವಕಾಶ ನೀಡಿರುವುದು ಆಕ್ರೋಶಕ್ಕೆ ಕಾರಣವಾಗಿದೆ. ಇನ್ನೂ ಈ ವಿಚಾರವಾಗಿ, ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಾಧ್ಯಮಗಳ ಮೂಲಕ ವಿಚಾರ ತಿಳಿದುಕೊಂಡಿದ್ದೇವೆ.
ನಿಮಗೆ ಪ್ಲಾಸ್ಟಿಕ್ ಬಾಕ್ಸ್ʼನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ..? ಶೀಘ್ರದಲ್ಲೇ ಕ್ಯಾನ್ಸರ್ ಬರುವುದು ಖಚಿತ
ಈ ಬಗ್ಗೆ ನಿರ್ದೇಶನ ಕೊಡುವ ಅಧಿಕಾರ ಯಾವ ಅಧಿಕಾರಿಗೂ ಇಲ್ಲ. ಈ ರೀತಿ ಮಾಡುವುದಕ್ಕೆ ಕಾನೂನಿನಲ್ಲಿ ಅವಕಾಶ ಇಲ್ಲ. ಈ ವಿಚಾರ ನನ್ನ ವ್ಯಾಪ್ತಿಗೆ ಬರುವುದಿಲ್ಲ, ಹಾಗಾಗಿ ಸಂಬಂಧಪಟ್ಟ ಇಲಾಖೆ ಜತೆ ಚರ್ಚಿಸುವೆ. ಈ ಘಟನೆ ನನ್ನ ಜಿಲ್ಲೆಯಲ್ಲಿ ಆಗಿರುವುದರಿಂದ ಕ್ರಮಕ್ಕೆ ಸೂಚನೆ ನೀಡುತ್ತೇವೆ. ವಿದ್ಯಾರ್ಥಿಗಳ ವಿಚಾರದಲ್ಲಿ ಈ ರೀತಿ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.