ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಿಂದಾಗಿ ಅವಾಂತರಗಳು ಸೃಷ್ಟಿಯಾಗಿದ್ದು, ಮಳೆಯಿಂದ ಹಾನಿಯಾಗಿರುವ ಪ್ರದೇಶಗಳಿಗೆ ವಿಧಾನ ಪರಿಷತ್ ಶಾಸಕರಾದ ಟಿ ಎ ಶರವಣ ಹಾಗೂ ವಿಧಾನ ಸಭೆ ಶಾಸಕರುಗಳು ಸೇರಿದಂತೆ , ಜೆಡಿಎಸ್ ಯುವ ನಾಯಕರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಭೇಟಿ ನೀಡಿ ಸಂತ್ರಸ್ತರ ಸ್ಥಿತಿಗತಿಗಳನ್ನು ಪರಿಶೀಲಿಸಿ,
ಪ್ರವಾಹದಲ್ಲಿ ಪ್ರಾಣ ಕಳೆದುಕೊಂಡ ನಾಲ್ವರಿಗೆ ತಲಾ 50 ಸಾವಿರ ರೂಪಾಯಿಗಳ ಪರಿಹಾರ ಮೊತ್ತವನ್ನು ಜೆಡಿಎಸ್ ಪಕ್ಷದ ವತಿಯಿಂದ ನೀಡಲು ನಿರ್ಧರಿಸಲಾಯಿತು. ಈ ವೇಳೆ ಮಾತನಾಡಿದ ಪರಿಷತ್ ಶಾಸಕ ಟಿ ಎ ಶರವಣ ಅವರು, ಕೈಲಾಸದಿಂದ ಆ ಈಶ್ವರ ಧರೆಗಿಳಿದು ಬಂದರೂ ಆ ಶಿವನಿಂದಲೂ ಬೆಂಗಳೂರಿನ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ ಎನ್ನುವ ಮಾತನ್ನು ಮಾನ್ಯ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ನಿಮಗೆ ಕೆಲಸ ಮಾಡೋಕೆ ಆಗಲ್ಲ ಅಂದ್ರೆ ರಾಜೀನಾಮೆ ಕೊಟ್ಟು ಮನೆಗೆ ಹೋಗ್ರಿ. ಯಾಕ್ರೀ ಅಧಿಕಾರದಲ್ಲಿ ಗೂಟ ಹೊಡೆದುಕೊಂಡು ಕೂತಿದ್ದೀರಾ? ಎಂದು ವಿಧಾನಪರಿಷತ್ ಹಿರಿಯ ಸದಸ್ಯ ಮತ್ತು ಜೆಡಿಎಸ್ ಹಿರಿಯ ನಾಯಕ ಟಿ. ಎ.ಶರವಣ ಆಕ್ರೋಶ ವ್ಯಕ್ತಪಡಿಸಿದರು.