Close Menu
Ain Live News
    Facebook X (Twitter) Instagram YouTube
    Wednesday, June 18
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ರಾಜಕೀಯ
    • ಜಿಲ್ಲೆ
    • ಸಿನಿಮಾ
    • ಲೈಫ್ ಸ್ಟೈಲ್
    • ಜ್ಯೋತಿಷ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    Facebook X (Twitter) Instagram YouTube
    Ain Live News

    ಜಿಮ್: ವೋಲ್ವೊದಿಂದ 1,400 ಕೋಟಿ ರೂ. ಹೂಡಿಕೆ, ಹೊಸಕೋಟೆ ಘಟಕ ವಿಸ್ತರಣೆ

    By Author AINFebruary 13, 2025
    Share
    Facebook Twitter LinkedIn Pinterest Email
    Demo

    ಬೆಂಗಳೂರು: ಬಸ್ ಮತ್ತು ಟ್ರಕ್ ತಯಾರಿಕೆಗೆ ಹೆಸರಾಗಿರುವ ಸ್ವೀಡನ್ನ ಮೂಲದ ವೋಲ್ವೊ ಕಂಪನಿಯು ಹೊಸಕೋಟೆಯಲ್ಲಿರುವ ತನ್ನ ತಯಾರಿಕಾ ಸ್ಥಾವರವನ್ನು ವಿಸ್ತರಿಸಲು ತೀರ್ಮಾನಿಸಿದ್ದು, ಇದಕ್ಕಾಗಿ 1,400 ಕೋಟಿ ರೂ. ಬಂಡವಾಳ ಹೂಡಿಕೆ ಮಾಡುವುದಾಗಿ ಘೋಷಿಸಿದೆ. ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಅವರ ಅಧಿಕೃತ ನಿವಾಸ `ಕಾವೇರಿ’ಯಲ್ಲಿ ಗುರುವಾರ ಒಡಂಬಡಿಕೆಗೆ ಅಂಕಿತ ಬಿದ್ದಿದೆ.

    ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಉಪಸ್ಥಿತಿಯಲ್ಲಿ ಈ ಪ್ರಕ್ರಿಯೆ ನೆರವೇರಿತು. ಒಡಂಬಡಿಕೆಗೆ ಸರಕಾರದ ಪರವಾಗಿ ಕೈಗಾರಿಕಾ ಇಲಾಖೆ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್ ಮತ್ತು ವೋಲ್ವೊ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಕಮಲ್ ಬಾಲಿ ಸಹಿ ಹಾಕಿದರು. ಇಲ್ಲಿನ ಅರಮನೆ ಆವರಣದಲ್ಲಿ ನಡೆಯತ್ತಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಸಕ್ರಿಯವಾಗಿರುವ ವೊಲ್ವೊ ಸಂಸ್ಥೆ, ಅದರ ಭಾಗವಾಗಿ ಈ ಪ್ರಮುಖ ಒಪ್ಪಂದಕ್ಕೆ ಸಹಿ ಹಾಕಿದೆ.

    ಮುಖ್ಯಮಂತ್ರಿ ಸಿದ್ದರಾಮಯ್ಯ ಮಾತನಾಡಿ, `ವೋಲ್ವೋ ಕಂಪನಿಯು 25 ವರ್ಷಗಳ ಹಿಂದೆಯೇ ರಾಜ್ಯಕ್ಕೆ ಬಂದು, ಬಂಡವಾಳ ಹೂಡಿ, ಬದಲಾವಣೆಗೆ ನಾಂದಿ ಹಾಡಿತು. ಈಗ ನಮ್ಮಲ್ಲಿ ವೋಲ್ವೊ ಎನ್ನುವುದು ಉತ್ಕೃಷ್ಟ ಗುಣಮಟ್ಟದ ಬಸ್ಸುಗಳಿಗೆ ಇನ್ನೊಂದು ಹೆಸರಾಗಿದೆ. ರಾಜ್ಯ ಸಾರಿಗೆ ನಿಗಮದ ಐಷಾರಾಮಿ ಬಸ್ಸುಗಳನ್ನು ಕೂಡ ಜನ ಇದೇ ಹೆಸರಿನಿಂದ ಕರೆಯುತ್ತಿದ್ದಾರೆ. ವೋಲ್ವೊ ಕಂಪನಿಗೆ ಸರಕಾರ ಅಗತ್ಯ ಸೌಲಭ್ಯ ಮತ್ತು ನೆರವು ಒದಗಿಸಲಿದೆ. ಕಂಪನಿಯು ತನ್ನಲ್ಲಿ ಹೆಚ್ಚಿನ ಕನ್ನಡಿಗರಿಗೆ ಕೆಲಸ ಕೊಡಬೇಕು. ಇದರಿಂದ ಸ್ಥಳೀಯರಿಗೆ ಭದ್ರತೆ ಮತ್ತು ಆರ್ಥಿಕ ಬೆಳವಣಿಗೆ ಎರಡನ್ನೂ ಸಾಧಿಸಬಹುದು’ ಎಂದರು.

    Vivo Camera Smartphone: ಕೈ ಗೆಟಕುವ ದರದಲ್ಲಿ ಲಾಂಚ್‌ ಆಗಲಿದೆ ವಿವೋ ಫೋನ್: ಇದರ ಫೀಚರ್ಸ್ ನೋಡಿದರೆ ಶಾಕ್‌ ಆಗೋದು ಗ್ಯಾರಂಟಿ

    ವೋಲ್ವೊ ಸಿಇಒ ಮಾರ್ಟಿನ್ ಲುಂಡ್ಸ್ಟೆಡ್ ಮಾತನಾಡಿ, `ಕರ್ನಾಟಕದಲ್ಲಿ ಕಂಪನಿಯು ಪೀಣ್ಯ, ಹೊಸಕೋಟೆ ಮತ್ತು ಧಾರವಾಡ ಸಮೀಪದ ಪೀತಂಪುರದಲ್ಲಿ ತಯಾರಿಕಾ ಘಟಕಗಳನ್ನು ಹೊಂದಿದೆ. ಈಗ ನಾವು ವರ್ಷಕ್ಕೆ ಇಲ್ಲಿ 3,000 ಬಸ್/ಟ್ರಕ್ ತಯಾರಿಸುತ್ತಿದ್ದೇವೆ. ಹೊಸಕೋಟೆ ಸ್ಥಾವರದ ವಿಸ್ತರಣೆಯಿಂದ ನಾವು ವರ್ಷಕ್ಕೆ 20 ಸಾವಿರ ಬಸ್/ಟ್ರಕ್ ತಯಾರಿಸಬಹುದು. ಈ ಸಾಮರ್ಥ್ಯ ವೃದ್ಧಿಯಿಂದ ಉದ್ಯೋಗಸೃಷ್ಟಿಯೂ ಆಗಲಿದ್ದು, ಜಾಗತಿಕ ಪೂರೈಕೆ ಸರಪಳಿಯಲ್ಲಿ ಭಾರತ ಮತ್ತು ಕರ್ನಾಟಕದ ಸ್ಥಾನ ಮತ್ತಷ್ಟು ಸುಭದ್ರವಾಗಲಿದೆ. ಜತೆಗೆ ಸ್ಥಳೀಯ ಮಾರುಕಟ್ಟೆ ಅಗತ್ಯಗಳನ್ನೂ ಸರಾಗವಾಗಿ ಪೂರೈಸಲು ಸಾಧ್ಯವಾಗಲಿದೆ’ ಎಂದರು.

    ಬೆಂಗಳೂರು ವೋಲ್ವೋ ಕಂಪನಿಯ ಪಾಲಿಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ 4ನೇ ಅತಿದೊಡ್ಡ ತಾಣವಾಗಿದೆ. ಇಲ್ಲಿರುವ ನಮ್ಮ ಜಿಸಿಸಿ ಕೇಂದ್ರದಲ್ಲಿ 3,500ಕ್ಕೂ ಹೆಚ್ಚು ಮಂದಿ ಕೆಲಸ ಮಾಡುತ್ತಿದ್ದು, ಇಲ್ಲಿ ಆರ್ & ಡಿ, ಐಟಿ, ಖರೀದಿ, ಲಾಜಿಸ್ಟಿಕ್ಸ್ ಮತ್ತು ಹಣಕಾಸು ಸೇವೆಗಳನ್ನು ನಿರ್ವಹಿಸಲಾಗುತ್ತಿದೆ. ಇದಲ್ಲದೆ ಮಧ್ಯಪ್ರದೇಶದಲ್ಲಿ ಕೂಡ ಜಂಟಿ ಸಹಭಾಗಿತ್ವದ ಯೋಜನೆ ಜಾರಿಯಲ್ಲಿದೆ. ಕಂಪನಿಯ ವಹಿವಾಟು ಈಗ ವರ್ಷಕ್ಕೆ 50 ಬಿಲಿಯನ್ ಡಾಲರ್ ದಾಟಿದೆ ಎಂದು ಅವರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್ ಕೆ ಅತೀಕ್ ಮತ್ತು ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

    Demo
    Share. Facebook Twitter LinkedIn Email WhatsApp

    Related Posts

    ಕೆಂಪೇಗೌಡ ಏರ್ಪೋಟ್’ನಿಂದ ಪ್ರಯಾಣಿಕರಿಗಾಗಿ ಮತ್ತೊಂದು ಸೇವೆ..! ಮಕ್ಕಳಿಗಾಗಿ ಹೊಸ ಟ್ರಾಲಿ ವ್ಯವಸ್ಥೆ

    June 18, 2025

    ಬಹುಕೋಟಿ ವಂಚನೆ ಕೇಸ್: ಐಶ್ವರ್ಯಾ ಗೌಡ ಕೇಸ್ ಸಿಐಡಿಗೆ ಶಿಫ್ಟ್..!

    June 18, 2025

    ಟೀನೇಜ್ ಲವ್.. ಮಕ್ಕಳು ದಾರಿ ತಪ್ಪದಂತೆ ಮಾರ್ಗದರ್ಶನ ಮಾಡುವುದು ಹೇಗೆ? ಇಲ್ಲಿದೆ ನೋಡಿ ಟಿಪ್ಸ್

    June 18, 2025

    ಖಾಲಿ ಇರುವ 35000 ಸಾವಿರ ನಿಮ್ಮ ಹುದ್ದೆಗಳನ್ನು ಹಂತ ಹಂತವಾಗಿ ಭರ್ತಿ ಮಾಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

    June 18, 2025

    ತಲೆ ತಿರುಗಿ 2ನೇ ಮಹಡಿಯಿಂದ ಬಿದ್ದ ವಿದ್ಯಾರ್ಥಿನಿ..! ಜಸ್ಟ್ ಮಿಸ್.. ಪ್ರಾಣಾಪಾಯದಿಂದ ಪಾರು

    June 18, 2025

    ರಚಿತಾ ರಾಮ್‌ ವಿರುದ್ಧ ಮತ್ತೊಂದು ಕಂಪ್ಲೇಂಟ್‌..ಏನ್‌ ಮಾಡಿದ್ರು ಡಿಂಪಲ್‌ ಕ್ವೀನ್!?

    June 18, 2025

    ವಾಹನ ಸವಾರರಿಗೆ ಗುಡ್ ನ್ಯೂಸ್: ಫಾಸ್ಟ್ ಟ್ಯಾಗ್ ಆಧಾರಿತ ವಾರ್ಷಿಕ ಪಾಸ್ ಜಾರಿ!

    June 18, 2025

    ಇಂಡೋನೇಷ್ಯಾದಲ್ಲಿ ಜ್ವಾಲಾಮುಖಿ ಸ್ಫೋಟ: ಬಾಲಿಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ವಾಪಸ್

    June 18, 2025

    ಮೆಟ್ರೋಗಳಲ್ಲಿ 8 ನಂದಿನಿ ಮಳಿಗೆ ತೆರೆಯಲು ಸೂಚನೆ: ಡಿಸಿಎಂ ಡಿ.ಕೆ. ಶಿವಕುಮಾರ್

    June 18, 2025

    ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳು 6,483ಕ್ಕೆ ಇಳಿಕೆ..! ಸಾವಿನ ಸಂಖ್ಯೆ 113 ಕ್ಕೆ ಏರಿಕೆ

    June 18, 2025

    ನಮ್ಮ ನಂದಿನಿ ಒಕೆ.. ಅಮುಲ್ ಯಾಕೆ? BMRCL ನಡೆಗೆ ಸಾರ್ವಜನಿಕರಿಂದ ಆಕ್ಷೇಪ – JDS ವಾಗ್ದಾಳಿ

    June 18, 2025

    Shubhanshu Shukla: ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತರಿಕ್ಷ ಯಾನಕ್ಕೆ ಹೊಸ ಡೇಟ್ ಫಿಕ್ಸ್..!

    June 18, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.