Close Menu
Ain Live News
    Facebook X (Twitter) Instagram YouTube
    Wednesday, May 14
    Facebook X (Twitter) Instagram YouTube
    Ain Live News
    Demo
    • Home
    • ಬೆಂಗಳೂರು
    • ಜಿಲ್ಲೆ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಲೈಫ್ ಸ್ಟೈಲ್
    • ಚಲನಚಿತ್ರ
    • ಕ್ರೀಡೆ
    • ತಂತ್ರಜ್ಞಾನ
    • ಕೃಷಿ
    • ಗ್ಯಾಲರಿ
    • ವಿಡಿಯೋ
    • ಜ್ಯೋತಿಷ್ಯ
    Facebook X (Twitter) Instagram YouTube
    Ain Live News

    ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ!

    By AIN AuthorMay 14, 2025
    Share
    Facebook Twitter LinkedIn Pinterest Email
    Demo

    ರಾಮನಗರ, ಮೇ 14: “ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

    ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಬಾಲಕಿಯ ಶವ ರೈಲ್ವೇ ಹಳಿ ಬಳಿ ಪತ್ತೆಯಾಗಿತ್ತು. ಆಕೆಯ ಕುಟುಂಬ ಸದಸ್ಯರಿಗೆ ಬುಧವಾರ ಸಾಂತ್ವನ ಹೇಳಿ, ಜಿಲ್ಲಾಡಳಿತ ಪರವಾಗಿ ₹4,12,500 ಹಾಗೂ ಪಂಚಾಯ್ತಿ ವತಿಯಿಂದ ₹50,000 ಪರಿಹಾರ ಚೆಕ್ ವಿತರಿಸಿ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

    ಬಾಯಲ್ಲಿ ಸಾಮಾಜಿಕ ನ್ಯಾಯ ಹೇಳೋದು, ಸಾಮಾಜಿಕ ನ್ಯಾಯದ ವಿರೋಧಿಗಳ ಜೊತೆ ಹೋಗಿ ಸೇರೋದು ಸರಿಯಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ!

    “ಈ ಅನುಮಾನಾಸ್ಪದ ಸಾವಿನ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಯಾರ ಒತ್ತಡಕ್ಕೂ ಒಳಗಾಗದೆ ನ್ಯಾಯಪರ, ನಿಷ್ಠುರವಾಗಿ ತನಿಖೆ ನಡೆಯಲಿದೆ” ಎಂದರು.

    “ಯಾರ‌ ಮೇಲಾದರೂ ಅನುಮಾನವಿದೆಯೇ ಎಂದು ಬಾಲಕಿಯ ಕುಟುಂಬಸ್ಥರ ಬಳಿ ಕೇಳಿದೆ. ಅವರು ಇಲ್ಲ ಎಂದು ಹೇಳುತ್ತಿದ್ದಾರೆ. ತನಿಖೆ ಮಾಡುವುದು ಪೊಲೀಸ್ ಇಲಾಖೆ ಕರ್ತವ್ಯ” ಎಂದರು.

    ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಎಲ್ಲಾ ಆಯಾಮದಲ್ಲಿಯೂ ಪೊಲೀಸರು ತನಿಖೆ ಮಾಡಲಿದ್ದಾರೆ. ದ್ವೇಷದಿಂದ ನಡೆದಿದೆಯೇ? ಅತ್ಯಾಚಾರವಾಗಿದೆಯೇ? ಏನಾದರೂ ಬೇರೆ ಕಾರಣ ಇದೆಯೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ನಾವು ನ್ಯಾಯ ಒದಗಿಸುತ್ತೇವೆ ” ಎಂದರು.

    “ಬಾಲಕಿಯು ಹಾಸ್ಟೆಲ್ ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿತ್ತು. ರಜೆಗೆಂದು ಊರಿಗೆ ಬಂದ ಸಂದರ್ಭದಲ್ಲಿ ಈ ಅನಾಹುತ ಘಟನೆ ನಡೆದಿದೆ. ಮಾತುಬಾರದ, ಕಿವಿ ಕೇಳದಿದ್ದರೂ ಚುರುಕಾಗಿದ್ದ ಬಾಲಕಿ ಎಂದು ಎಲ್ಲರೂ ಹೇಳುತ್ತಿದ್ದಾರೆ” ಎಂದರು.

    ಘಟನೆ ನಡೆದಿರುವ ಈ ಊರಿನಲ್ಲಿ ಮೂಲಸೌಕರ್ಯಗಳ ಕೊರತೆಯಿದೆ, ಬೀದಿ ದೀಪಗಳ ವ್ಯವಸ್ಥೆಯಿಲ್ಲ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಈಗ ಈ ಪ್ರಕರಣದ ಜತೆಗೆ ಬೇರೆ ವಿಚಾರಗಳನ್ನು ಬೆರೆಸಲು ಹೋಗುವುದಿಲ್ಲ. ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು” ಎಂದರು.

    ಆರೋಪಿಗಳ ಬಂಧನವಾಗಿದೆಯೇ ಎಂದಾಗ, “ತನಿಖೆ ನಡೆಯುತ್ತಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡುತ್ತಾರೆ. ನಾನು ಅದನ್ನು ಹೇಳಲು ಆಗುವುದಿಲ್ಲ” ಎಂದು ತಿಳಿಸಿದರು.

    Post Views: 9

    Demo
    Share. Facebook Twitter LinkedIn Email WhatsApp

    Related Posts

    ಬೆಂಗಳೂರು ಸೇಫ್‌ ಅಲ್ಲ ಅನ್ನೋವರು ಈ ಸುದ್ದಿ ಓದಲೇಬೇಕು..ರಾಜಧಾನಿ ಅತ್ಯಂತ ಸುರಕ್ಷಿತ ನಗರ ಎಂದ ಸರ್ವೇ

    May 14, 2025

    ಜವಾಬ್ದಾರಿಯಿಂದ ಕೆಲಸ ಮಾಡಿ: ಅಧಿಕಾರಿಗಳಿಗೆ ಎನ್ .ಚಲುವರಾಯಸ್ವಾಮಿ ಸೂಚನೆ!

    May 14, 2025

    ಬಿಳಿಗಿರಿರಂಗನಬೆಟ್ಟದ ರೇಷ್ಮೆ ಕೃಷಿ ಕೇಂದ್ರಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಭೇಟಿ- ಪರಿಶೀಲನೆ!

    May 14, 2025

    ಕುಡಿಯುವ ನೀರಿನ ಯೋಜನೆ ಕಾಮಗಾರಿ ತ್ವರಿತ ಪೂರ್ಣಗೊಳಿಸಿ- ಸಚಿವ ಕೆ. ವೆಂಕಟೇಶ್!

    May 14, 2025

    ಅಮಾನವೀಯ ಕೃತ್ಯ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ!

    May 14, 2025

    ಸಾಲದ ವಿಚಾರಕ್ಕೆ ಕಿರಿಕ್: ಅಳಿಯನನ್ನೇ ಕೊಚ್ಚಿ ಕೊಲೆ ಮಾಡಿದ ಮಾವ!

    May 14, 2025

    ಟಾಟಾ ಏಸ್ ಪಲ್ಟಿ: 31 ಜನರಿಗೆ ಗಾಯ.. ತಪ್ಪಿದ ದುರಂತ!

    May 14, 2025

    ಗನ್‌ ನಿಂದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಹಲ್ಲೆಗೆ ಯತ್ನ: ಹಲ್ಲೆ ವಿಡಿಯೋ ವೈರಲ್

    May 14, 2025

    ಕಲ್ಲಹಳ್ಳಿ ಬಳಿಯ ಪ್ರಪಾತದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ಕೊಲೆ ಶಂಕೆ

    May 14, 2025

    KSRTC ಬಸ್- ಕಾರು ನಡುವೆ ಭೀಕರ ಅಪಘಾತ: ಓರ್ವ ಸಾವು, ಮತ್ತೊರ್ವನಿಗೆ ಗಂಭೀರ ಗಾಯ

    May 14, 2025

    ಶವವಾಗಿ ಪತ್ತೆಯಾದ ಮೂಕ ಬಾಲಕಿ..! ಕೊಲೆ ಹಿಂದಿದೆ ನೂರಾರು ಅನುಮಾನಗಳು

    May 14, 2025

    ಭಾರತೀಯ ಸೇನೆ ಪಾಕಿಸ್ತಾನಕ್ಕೆ ನುಗ್ಗಿ ಉಗ್ರಗಾಮಿಗಳನ್ನು ಮಣ್ಣು ಮುಕ್ಕಿಸಿದೆ: ಸಂಸದ ಯದುವೀರ್

    May 14, 2025
    © 2025 Copyright � All rights reserved AIN Developed by Notch IT Solutions..
    • Latest Trending news today
    • Trending News in kannada
    • Kannada online news
    • latest trends and news from India and around the world
    • New Kannada news channel
    • latest and breaking news in Kannada
    • Business News Kannada
    • Karnataka news headlines
    • Live Updates on Karnataka
    • flash news in Kannada politics

    Type above and press Enter to search. Press Esc to cancel.