ದೇವನಹಳ್ಳಿ:- ರಾಜ್ಯ ಸರಕಾರ ಅಧಿಕಾರ ಬಂದು 2 ವರ್ಷ ಪೂರೈಸುತ್ತಿರುವ ಹಿನ್ನೆಲೆ ಸರಕಾರದ ಸಾಧನೆ ಸಮಾರಂಭವನ್ನು ಇಂದು ಬೆಂಗಳೂರು ಗ್ರಾಮಾಂತರದ ಜಿಲ್ಲಾ ಕೇಂದ್ರವಾದ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಲಾಗಿದೆ.
ಜಸ್ಟ್ 15 ಸಾವಿರಕ್ಕೆ, ಮಹಿಳೆ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಮೂವರು ಅರೆಸ್ಟ್!
ಸಚಿವ ಕೆಚ್ ಹೆಚ್ ಮುನಿಯಪ್ಪ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯುತ್ತಿದ್ದು, ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ,ಡಿಸಿಎಂ ಡಿಕೆ ಸೇರಿದಂತೆ ಸಚಿವರು ಶಾಸಕರು ಭಾಗಿಯಾಗಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಅವರು, 256 ಕೋಟಿಯಷ್ಟು ಕಾಮಗಾರಿಗಳಿಗೆ ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ.
125 ಕೋಟಿಯಷ್ಟು ಸಿಎಸ್ ಆರ್ ಅನುಧಾನದ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದು, 465 ಕೋಟಿ ಕಾಮಗಾರಿಗಳನ್ನು ಉದ್ಘಾಟಿಸಲಿದ್ದಾರೆ. ಅಷ್ಟೇ ಅಲ್ಲದೇ 1000 ಕೋಟಿಯಷ್ಟು ಸವಲತ್ತು ವಿತರಣೆ ಮತ್ತು ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ.
ಸಮಾವೇಶಕ್ಕೆ ದೇವನಹಳ್ಳಿ, ದೊಡ್ಡಬಳ್ಳಾಪುರ, ನೆಲಮಂಗಲ ಹೊಸಕೋಟೆ ತಾಲೂಕಿನಿಂದ ಜನರು ಆಗಮಿಸಲಿದ್ದಾರೆ. 50 ಸಾವಿರಕ್ಕೂ ಹೆಚ್ಚು ಜನ ಸಮಾವೇಶಕ್ಕೆ ಆಗಮಿಸುವ ಸಾಧ್ಯತೆ ಇದ್ದು, ಭದ್ರತೆಗಾಗಿ 1000 ಕ್ಕೂ ಅಧಿಕ ಪೋಲೀಸ್ ಸಿಬ್ಬಂದಿ ಮತ್ತು ತುಕಡಿಗಳನ್ನು ನಿಯೋಜನೆ ಮಾಡಲಾಗಿದೆ. ಬಿಜೆಪಿ ಜನಾಕ್ರೋಶ ಕಾರ್ಯಕ್ರಮಕ್ಕೆ ಪ್ರತಿಯಾಗಿ ಕಾಂಗ್ರೆಸ್ ಇಂದಿನಿಂದ ಸಾಧನ ಸಮಾವೇಶಗಳ ಆಯೋಜನೆ ಮಾಡಿದೆ.
ಡಿಕೆ ಶಿವಕುಮಾರ್, ಸಿಎಂ ಸಿದ್ದರಾಮಯ್ಯ ಆಗಮನ:-
ಸರ್ಕಾರದ ಎರಡು ವರ್ಷದ ಸಾಧನೆ ಸಮಾವೇಶಕ್ಕೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಕೆ ಶಿವಕುಮಾರ್ ವೇದಿಕೆಗೆ ಆಗಮಿಸಿದ್ದಾರೆ. ಎಂಟ್ರಿ ವೇಳೆ ಜನ ಸಾಗರದ ಕಡೆ ಕೈ ಬೀಸಿ ಗ್ರ್ಯಾಂಡ್ ಆಗಿ ಎಂಟ್ರಿ ಕೊಟ್ಟಿದ್ದಾರೆ.